ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಸಾಧ್ಯತೆ; ಪ್ರಚಾರಕ್ಕೆ ಎಲ್ಲ ಚಾಪರ್‌ಗಳನ್ನು ಬುಕ್‌ ಮಾಡಿರುವ ಬಿಜೆಪಿ

Date:

Advertisements

ಬಿಜೆಪಿಯು ಅವಧಿಪೂರ್ವಕವಾಗಿ ಡಿಸೆಂಬರ್‌ನಲ್ಲಿಯೇ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆಯಿದ್ದು, ಕೇಸರಿ ಪಕ್ಷವು ಪ್ರಚಾರಕ್ಕಾಗಿ ದೇಶದಲ್ಲಿರುವ ಎಲ್ಲ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.

ಕೋಲ್ಕತ್ತಾದ ಟಿಎಂಸಿ ಯುವ ಘಟಕದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ರಾಷ್ಟ್ರವು ನಿರಂಕುಶ ಆಡಳಿತವನ್ನು ಎದುರಿಸುವುದನ್ನು ಖಚಿತಪಡಿಸುತ್ತದೆ” ಎಂದು ಎಚ್ಚರಿಸಿದರು.

“ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಡಿಸೆಂಬರ್ 2023ರಲ್ಲಿ ಲೋಕಸಭೆ ಚುನಾವಣೆಯನ್ನು ಬಿಜೆಪಿ ನಡೆಸಬಹುದು. ಕೇಸರಿ ಪಕ್ಷವು ಈಗಾಗಲೇ ಸಮುದಾಯಗಳ ನಡುವಿನ ದ್ವೇಷದ ಘರ್ಷಣೆಯ ರಾಷ್ಟ್ರವಾಗಿ ಮಾಡಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತಾರೆ” ಎಂದು ಮಮತಾ ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? 370ನೇ ವಿಧಿ ರದ್ದು ವಿರುದ್ಧ ವಾದಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದ ಉಪನ್ಯಾಸಕರ ಅಮಾನತು; ವಿವರಣೆ ಕೇಳಿದ ಸುಪ್ರೀಂ

“ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ. ಆದ್ದರಿಂದ ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸುವಂತಿಲ್ಲ” ಎಂದ ಅವರು, “ಬಂಗಾಳದಲ್ಲಿ ಮೂರು ದಶಕಗಳ ಸಿಪಿಎಂ ಆಡಳಿತವನ್ನು ಸೋಲಿಸಿದ್ದೇನೆ ಮತ್ತು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇನೆ” ಎಂದರು.

ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಿದ ಎಬಿವಿಪಿ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

“ವಿಶ್ವವಿದ್ಯಾಲಯದಲ್ಲಿ ದ್ವೇಷದ ಘೋಷಣೆಗಳಲ್ಲಿ ತೊಡಗಿರುವವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಹೇಳಿದ ಮಮತಾ ಬ್ಯಾನರ್ಜಿ, ಇಂತಹ ಘೋಷಣೆಗಳನ್ನು ಕೂಗುವವರು ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ ಎಂಬುದನ್ನು ಮರೆಯಬಾರದು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X