ಬೀದರ್‌ | ಔರಾದ, ಕಮಲನಗರ ತಾಲೂಕು ಬರಪೀಡಿತ ಘೋಷಣೆಗೆ ಶಾಸಕ ಚವ್ಹಾಣ ಆಗ್ರಹ

Date:

Advertisements
  • ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ
  • ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ. ರೈತರು ಆತಂಕದಲ್ಲಿದ್ದು, ಸರ್ಕಾರ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಶಾಸಕರು, “ಔರಾದ(ಬಿ) ಕ್ಷೇತ್ರದಲ್ಲಿ ಮುಂಗಾರು ಹಂಗಾಮಿನ ಆರಂಭದಲ್ಲಿ ಒಂದು ತಿಂಗಳು ಮಳೆಯಾಗದಿರುವುದರಿಂದ ಬಿತ್ತನೆಯೂ ವಿಳಂಬವಾಗಿತ್ತು. ನಂತರ ತೀವ್ರ ಮಳೆಯಾಗಿದೆ. ಕಳೆದೊಂದು ತಿಂಗಳಿನಿಂದ ಮಳೆಯಾಗದಿರುವುದರಿಂದ ಸದ್ಯ ಬಿತ್ತನೆಯಾದ ಬೆಳೆಗಳೆಲ್ಲ ಸೊರಗಿ ನಿಂತಿವೆ. ಮಳೆಯ ಸಮಸ್ಯೆಯಿಂದಾಗಿ ಎರಡ್ಮೂರು ಬಾರಿ ಬಿತ್ತನೆ ಮಾಡಿ ನಷ್ಟ ಅನುಭವಿಸಿರುವ ಕ್ಷೇತ್ರದ ರೈತರು ಇದೀಗ ಮಳೆಯ ಆಭಾವದಿಂದ ಚಿಂತಿತರಾಗಿದ್ದಾರೆ” ಎಂದು ಹೇಳಿದರು.

“ಔರಾದ್‌ನಲ್ಲಿ ಬಹುತೇಕ ರೈತರು ಮಳೆಯನ್ನು ಆಶ್ರಯಿಸಿರುವುದರಿಂದ ಸಮರ್ಪಕ ಮಳೆಯಾದರೆ ಮಾತ್ರ ಫಸಲು ಸಿಗಬಹುದು. ಈ ಬಾರಿಯಾದರೂ ಉತ್ತಮ ಬಳೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಕ್ಷೇತ್ರದ ರೈತರು ತೀವ್ರ ನಿರಾಶರಾಗಿದ್ದಾರೆ. ತೀವ್ರ ಬಿಸಿಲಿನ ತಾಪಕ್ಕೆ ಹೊಲಗಳಲ್ಲಿನ ಬೆಳೆಗಳೆಲ್ಲವೂ ಸುಟ್ಟು ಹೋಗುತ್ತಿರುವುದರಿಂದ ಅನ್ನದಾತರು ದಿಕ್ಕು ತೋಚದೆ ಪರಿತಪಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ತೀವ್ರ ಬೆಳೆನಷ್ಟ ಹೊಂದಿದ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಅವಶ್ಯಕ ಬೆಳೆನಷ್ಟ ಪರಿಹಾರ ಬಿಡುಗಡೆ ಮಾಡಬೇಕೆಂದು” ಶಾಸಕರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Advertisements

ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ

2023-24ನೇ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆಹಾನಿಯಾದ ಸಂತ್ರಸ್ಥರಿಗೆ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ಆಗಸ್ಟ್ 28ರಂದು ಔರಾದ(ಬಿ) ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಔರಾದ(ಬಿ) ಕ್ಷೇತ್ರದ ಫಲಾನುಭವಿಗಳಿಗೆ ತಿಳುವಳಿಕೆ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಳೆಗಾಲದ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕ್ಷೇತ್ರದಲ್ಲಿ ಸಾಕಷ್ಟು ಮನೆಗಳು ಹಾನಿಗೊಂಡಿವೆ. ಸರ್ಕಾರದ ಮೇಲೆ ಒತ್ತಡ ತಂದು ಸಂತ್ರಸ್ಥರಿಗೆ ಪರಿಹಾರಧನ ಬಿಡುಗಡೆ ಮಾಡಲಾಗಿದೆ. ಔರಾದ(ಬಿ) ತಾಲ್ಲೂಕಿನ 104 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದ್ದು, ಕಮಲನಗರ ಹಾಗೂ ಉಳಿದ ಫಲಾನುಭವಿಗಳಿಗೆ ಶೀಘ್ರದಲ್ಲೇ ಪರಿಹಾರಧನ ಬಿಡುಗಡೆಯಾಗಲಿದೆ” ಎಂದರು.

“ತೀವ್ರ ಮಳೆಯಾದ ಸಂದರ್ಭದಲ್ಲಿ ನಾನು ಕ್ಷೇತ್ರದೆಲ್ಲೆಡೆ ಸುತ್ತಾಡಿ ವಾಸ್ತವವನ್ನು ಕಣ್ಣಾರೆ ವೀಕ್ಷಿಸಿ, ಮನೆ ಹಾನಿಯ ನಿಖರ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೆ. ತಹಸೀಲ್ದಾರರು ಸೇರಿದಂತೆ ಎಲ್ಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಶೀಘ್ರ ಪರಿಹಾರ ಬಿಡುಗಡೆಯಾಗಿದೆ. ಪ್ರತಿ ಫಲಾನುಭವಿಗಳ ಖಾತೆಗೆ 50 ಸಾವಿರ ಮಂಜೂರಾಗಿದ್ದು, ಇದನ್ನು ದುರುಪಯೋಗ ಮಾಡದೇ ಹಾನಿಯಾದ ಮನೆಯ ದುರಸ್ತಿಗೆ ಬಳಸಿಕೊಳ್ಳಬೇಕೆಂದು ತಿಳಿಸಿದ್ದಾರೆ. ಹಾಗೆಯೇ ದುರಸ್ತಿ ಮಾಡಿದ ಮನೆಗಳ ಖಚಿತತೆಯ ಬಗ್ಗೆ ಭಾವಚಿತ್ರಗಳನ್ನು ಸಲ್ಲಿಸುವಂತೆ” ಹೇಳಿದ್ದಾರೆ.

“ಸಮರ್ಪಕ ಮಳೆಯಾಗದ ಕಾರಣ ಔರಾದ(ಬಿ) ಕ್ಷೇತ್ರದಲ್ಲಿ ಸಾಕಷ್ಟು ಬೆಳೆನಷ್ಟವಾಗಿದೆ. ಕಂದಾಯ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ನೊಂದ ರೈತರಿಗೆ ಸರ್ಕಾರದ ಪರಿಹಾರಧನ ಸಿಗುವ ನಿಟ್ಟಿನಲ್ಲಿ ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ” ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಪಘಾತ ತಗ್ಗಿಸಲು ʼರಸ್ತೆ ಸುರಕ್ಷತಾ ಓಟʼ: ಎಸ್‌ಪಿ ಚನ್ನಬಸವಣ್ಣ

ಈ ಸಂದರ್ಭದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷರ ದೊಂಡಿಬಾ ನರೋಟೆ, ಔರಾದ(ಬಿ) ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ ಕೋಟೆ, ಗ್ರೇಡ್-2 ತಹಸೀಲ್ದಾರ ನರಸಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X