ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜಯನಗರದ ಡಿಪೋ 4ಕ್ಕೆ ಖ್ಯಾತ ನಟ ರಜನಿಕಾಂತ್ ಮಂಗಳವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿದ್ದು, ಸಿಬ್ಬಂದಿ ಮೊಗದಲ್ಲಿ ಮಂದಹಾಸ ಮೂಡಿದೆ.
ಈ ಹಿಂದೆ ಬಿಎಂಟಿಸಿ ನಿರ್ವಾಹಕನಾಗಿ ಕೆಲಸ ನಿರ್ವಹಿಸಿದ್ದ ತಲೈವಾ ರಜನಿಕಾಂತ್ ಸೀತಾಪತಿ ಅಗ್ರಹಾರದಲ್ಲಿ ರಾಯರ ದರ್ಶನ ಪಡೆದು ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ.
ಈ ವೇಳೆ ಬಿಎಂಟಿಸಿ ಸಿಬ್ಬಂದಿ ಜತೆಗೆ ಸಮಯ ಕಳೆದ ರಜನಿಕಾಂತ್ ಈ ಹಿಂದೆ ತಾವೂ ಕಾರ್ಯ ನಿರ್ವಹಿಸಿದ್ದರ ಬಗ್ಗೆ ಹಳೆಯ ನೆನಪು ಮೆಲುಕು ಹಾಕಿದರು.
ಬಿಎಂಟಿಸಿ ಸಿಬ್ಬಂದಿ ರಜನಿಕಾಂತ್ ದಿಢೀರ್ ಭೇಟಿಗೆ ಸಂತಸ ವ್ಯಕ್ತಪಡಿಸಿದರು. ಕೆಲಕಾಲ ರಜನಿಕಾಂತ್ ಜತೆಗೆ ಮಾತನಾಡಿ, ಸೆಲ್ಫಿ ಕ್ಲಿಕ್ಕಿಸಿಕೊಂಡರು.