ಪೀಠೋಪಕರಣಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ಕಲಬುರಗಿ ನಗರದ ಸ್ಟೇಷನ್ ರಸ್ತೆಯ ಗೋಲ್ಡ್ ಹಬ್ ಮುಂಭಾಗದ ರಸ್ತೆಯ ಪಕ್ಕದಲ್ಲಿರುವ ಪೀಠೋಪಕರಣದ ಅಂಗಡಿಯ ಮುಂದೆ ಇರಿಸಿದ ಪೀಠೋಪಕರಣಗಳಿಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.
ಅಂಗಡಿಯ ಮಾಲೀಕ ನಿತ್ಯದಂತೆ ತನ್ನ ವ್ಯಾಪಾರ ಮುಗಿಸಿ ಮನೆಗೆ ತೆರಳಿದ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಅಪರಿಚಿತ ಕಿಡಿಗೇಡಿಯೊಬ್ಬ ಅಂಗಡಿ ಮುಂದೆ ಇರಿಸಿದ ಪೀಠೋಪಕರಣಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬೀದರ್ | ವಿವಿಧ ಬೇಡಿಕೆಗಳ ಈಡೇರಿಕೆಗೆ ಭೀಮ್ ಆರ್ಮಿ ಒತ್ತಾಯ
ಸ್ಟೇಷನ್ ಕಡೆ ಚಲಿಸುತ್ತಿದ್ದ ಜನರು ಗಮನಿಸಿದ್ದು, ಬೆಂಕಿ ನಂದಿಸಿದ್ದಾರೆ. ಇನ್ನು ಬೈಕಿನಲ್ಲಿ ಬಂದು ರಸ್ತೆ ಮೇಲೆ ನಿಂತು ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.