ಬೆಂಗಳೂರು | ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕ ಉನ್ನತೀಕರಣ

Date:

Advertisements

ಬೆಂಗಳೂರಿನ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಜೈವಿಕ ಅನಿಲ ಘಟಕಗಳನ್ನು ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, “ಪಾಲಿಕೆ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಸಂಸ್ಕರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಇರುವ ಜೈವಿಕ ಅನಿಲ ಘಟಕಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸಿ ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು” ಎಂದರು.

“ಪಟ್ಟಾಭಿರಾಮನಗರದಲ್ಲಿ ಸ್ಥಗಿತವಾಗಿದ್ದ ಜೈವಿಕ ಅನಿಲ ಘಟಕವನ್ನು ಉನ್ನತೀಕರಿಸಲಾಗಿದೆ. ನಿತ್ಯ 5 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಣೆ ಮಾಡಲಿದ್ದು, ಅದರಿಂದ 300 ಕ್ಯೂಬಿಕ್ ಮೀಟರ್ ಜೈವಿಕ ಅನಿಲ ಉತ್ಪಾದಿಸಬಹುದಾಗಿದೆ. ಈ ಸಂಬಂಧ ಕೂಡಲೇ ಪ್ರಾಯೋಗಿಕವಾಗಿ ಪ್ರಾರಂಭಿಸಿ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ವಿದ್ಯುತ್ ಆಗಿ ಪರಿವರ್ತಿಸಿ ಹತ್ತಿರದ ಉದ್ಯಾನವನ ಹಾಗೂ ಬೀದಿ ದೀಪಗಳಿಗೆ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

Advertisements

“ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ಉದ್ಯಾನವನಗಳಿಗೆ ಜೈವಿಕ ಅನಿಲ ಘಟಕದಿಂದ ಬರುವ ತ್ಯಾಜ್ಯದ ಸ್ಲರಿಯನ್ನು ಬಳಸಿಕೊಳ್ಳಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ನೀರು ವಿವಾದ | ಕನ್ನಡಿಗರ ಹಿತ ಬಲಿ ಕೊಟ್ಟ ರಾಜ್ಯ ಸರ್ಕಾರ: ಮುಖ್ಯಮಂತ್ರಿ ಚಂದ್ರು

ಯಡಿಯೂರಿನಲ್ಲಿರುವ ಜೈವಿಕ ಅನಿಲ ಘಟಕ ವೀಕ್ಷಣೆ

ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಬರುವ ಜೈವಿಕ ಅನಿಲ ಘಟಕವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಕಾರ್ಯವೈಖರಿಯನ್ನು ಪರಿಶೀಲಿಸಲಾಯಿತು. ಸದರಿ ಘಟಕವು ನಿತ್ಯ 5 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಣೆ ಮಾಡಲಿದ್ದು, ಅದರಿಂದ 300 ಕ್ಯೂಬಿಕ್ ಮೀಟರ್ ಜೈವಿಕ ಅನಿಲ ಉತ್ಪತ್ತಿಯಾಗುತ್ತಿದೆ. ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ವಿದ್ಯುತ್ ಆಗಿ ಪರಿವರ್ತಿಸಿ ಉದ್ಯಾನ ಹಾಗೂ ಬೀದಿ ಬದಿ ವಿದ್ಯುತ್ ದೀಪಗಳ ಬಳಕೆಗೆ ಬಳಸಿಕೊಳ್ಳಲಾಗುತ್ತಿದೆ.

ಪರಿಶೀಲನೆಯ ವೇಳೆ ಮುಖ್ಯ ಅಭಿಯಂತರರಾದ ರಾಜೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಂತೋಷ್, ಶಶಿಕಲಾ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X