ಮೈಸೂರು | ಗ್ಯಾರಂಟಿ ಯೋಜನೆಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ಬಳಸದಂತೆ ಒತ್ತಾಯ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ/ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ  ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.  “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

Advertisements

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಚೋರನಹಳ್ಳಿ ಶಿವಣ್ಣ, ಆಲಗೋಡು ಶಿವಕುಮಾರ್, ಕೆ.ವಿ ದೇವೇಂದ್ರ, ಕಿರಂಗೂರು ಸ್ವಾಮಿ, ಹಾರೋಹಳ್ಳಿ ನಟರಾಜ್, ಸಂತೋಷ್ ತಳೂರು ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X