ಕಾಂಗ್ರೆಸ್ ಬಡವರಿಗಾಗಿ ಇರುವ ಪಕ್ಷ : ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Date:

Advertisements

ಸದಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಬಿಜೆಪಿಯವರ ಸಾಧನೆ ಏನು ಎಂದು ಹೇಳಲಿ. ಕಾಂಗ್ರೆಸ್ ಈ ದೇಶದಲ್ಲಿ ಏನು ಸಾಧನೆ ಮಾಡಿದೆ ಎಂಬ ಬಗ್ಗೆ ನನ್ನ ಬಳಿ ದಾಖಲೆ ಇದೆ. ಕಾಂಗ್ರೆಸ್ ಬಡವರಿಗಾದರೆ, ಬಿಜೆಪಿ ಶ್ರೀಮಂತರಿಗಾಗಿ ಇರುವ ಪಕ್ಷ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನ ಮಹಾರಾಣಿ ಕಾಲೇಜಿನ ಮೈದಾನದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಎಸ್‌ಸಿ, ಎಸ್‌​ಟಿ​ಗಳ ಶಿಕ್ಷಣ ಕೇವಲ 7% ಇತ್ತು. ನಾವು 60% ಮಾಡಿದ್ದೇವೆ. ಕಾಂಗ್ರೆಸ್ 50 ವರ್ಷದಲ್ಲಿ ಏನೂ ಮಾಡಿಲ್ಲ ಅಂತ ಬೊಬ್ಬೆ ಹೊಡೆಯುತ್ತಲೇ ಇದ್ದಾರೆ. ನಾವು ಮಾಡಿದ್ದು ಬಹಳ ಇದೆ. 1947ರ ಹಿಂದೆ 2 ಲಕ್ಷ ಪ್ರಾಥಮಿಕ ಶಾಲೆಗಳಿದ್ದವು. ಈಗ 8 ಲಕ್ಷ ಇದೆ. ನರೇಗಾ ನಾವು ತಂದಿದ್ದು, ಆಹಾರ ಭದ್ರತಾ ಕಾಯ್ದೆ ತಂದಿದ್ದು, ಅದಕ್ಕೆ ಉಚಿತ ಅನ್ನ ಭಾಗ್ಯವೂ ತಂದದ್ದು ಕಾಂಗ್ರೆಸ್. ಬಡವರಿಗಾಗಿ ನಾವು ಯೋಜನೆಗಳನ್ನು ಮಾಡಿದ್ದೇವೆ. ಆದರೆ ಅವರು ಶ್ರೀಮಂತರಿಗಾಗಿ ಇದ್ದಾರೆ. ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ. ಮೋದಿ ಎಂದಿದ್ದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದ್ರೆ ರಾಹುಲ್ ಯಾವುದಕ್ಕೂ ಹೆದರಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿ ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ. ಕೇಂದ್ರದ ಯಾವ ನಾಯಕ ಈ ರೀತಿ ಮಾಡಿದ್ದಾರೆ. ಕಾಂಗ್ರೆಸ್ ವಾಗ್ದಾನ ಮಾಡಿದ್ದನ್ನು ಪೂರೈಸಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಅದನ್ನೇ ನಾನು ಕೂಡ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಅನುಷ್ಠಾನಕ್ಕೆ ಬಂದಿವೆ. ಯುವನಿಧಿ ಯೋಜನೆ ಒಂದು ಮಾತ್ರ ಬಾಕಿ ಇದೆ ಎಂದು ತಿಳಿಸಿದರು.

ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು. ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಾಗ, ಕೇಂದ್ರದ ಬಿಜೆಪಿ ನಾಯಕರು ಟೀಕೆ ಮಾಡುತ್ತಲೇ ಇದ್ದರು. ಇದರಿಂದ ಆರ್ಥಿಕತೆ ಕುಸಿಯುತ್ತದೆ. ಬೋಗಸ್ ಎಂದಿದ್ದರು. ಆದರೆ ಈಗ ನಾವು ಇದನ್ನು ಮಾಡಿ ತೋರಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X