ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಪ್ರವಾಹ ಹೆಚ್ಚಾಗಿದೆ.
ಪ್ರವಾಹ ಪರಿಸ್ಥಿತಿಯಿಂದ 22 ಜಿಲ್ಲೆಗಳ 3.40 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಕನಿಷ್ಠ 105 ಗ್ರಾಮಗಳು ತೊಂದರೆಗೀಡಾಗಿದೆ. ಮೋರಿಗಾಂವ್ ಜಿಲ್ಲೆಯಲ್ಲಿ ಪ್ರವಾಹವು 3,059 ಹೆಕ್ಟೇರ್‌ಗೂ ಹೆಚ್ಚು ಕೃಷಿ ಭೂಮಿ ಮುಳುಗಡೆಯಾಗಿದೆ.
“ಪ್ರವಾಹದಿಂದ ರಾಜ್ಯದಾದ್ಯಂತ ಸುಮಾರು 22,000 ಹೆಕ್ಟೇರ್ ಬೆಳೆಯನ್ನು ಮುಳುಗಿಸಿದೆ. ನಮ್ಮ ರೈತರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿಂದೆ ಸಂತ್ರಸ್ತ ರೈತರು ಸರ್ಕಾರದಿಂದ ಏನನ್ನೂ ಪಡೆದಿಲ್ಲ. ಆದರೆ ನಮ್ಮ ಸರ್ಕಾರ ರೈತರಿಗೆ ಪರಿಹಾರ ನೀಡಲಿದೆ. ನಾವು ಎಲ್ಲ ಜಿಲ್ಲೆಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ” ಎಂದು ಅಸ್ಸಾಂನ ಕೃಷಿ ಸಚಿವ ಅತುಲ್ ಬೋರಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗುರುಗ್ರಾಮ | ‘ನಿಮಗಿರುವುದು ಕೇವಲ 2 ದಿನ’; ಮುಸ್ಲಿಮರ ಏರಿಯಾದಲ್ಲಿ ಬೆದರಿಕೆಯ ಪೋಸ್ಟರ್‌ಗಳು
ಶಿವಸಾಗರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ವರ್ಷ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಧುಬ್ರಿ, ಗೋಲ್‌ಪಾರಾ, ಗುವಾಹಟಿ, ತೇಜ್‌ಪುರ್ ಮತ್ತು ನೇಮತಿಘಾಟ್ ಜಿಲ್ಲೆಗಳಲ್ಲಿ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಮಜುಲಿಯು ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 65,035 ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಗೋಲ್ಪಾರಾ 58,439, ಮೋರಿಗಾಂವ್ 44,181, ಬಿಸ್ವನಾಥ್ 36,671, ಶಿವಸಾಗರ್ 28,669 ಮತ್ತು ಲಖಿಂಪುರ ಜಿಲ್ಲೆಗಳಲ್ಲಿ 24,594 ಮಂದಿ ತೊಂದರೆಗೊಳಗಾಗಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಿಲ್ಲಾಡಳಿತಗಳು 153 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಒಟ್ಟು 22,000 ಹೆಕ್ಟೇರ್ ಕೃಷಿ ಭೂಮಿ ಪ್ರವಾಹದಿಂದ ಮುಳುಗಡೆಯಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.