ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಭಾರತ ಮತ್ತು ಚೀನಾದ ವಿದೇಶಾಂಗ ವಿಷಯದ ಬಗ್ಗೆ ತಿಳಿದಿರುವ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.
ಇಬ್ಬರು ಭಾರತೀಯ ಅಧಿಕಾರಿಗಳು, ಚೀನಾ ಮೂಲದ ಒಬ್ಬ ರಾಜತಾಂತ್ರಿಕ ಮತ್ತು ಇನ್ನೊಬ್ಬರು ಜಿ20 ರಾಷ್ಟ್ರದ ಸರ್ಕಾರಕ್ಕಾಗಿ ಕೆಲಸ ಮಾಡುವ ಒಬ್ಬ ಅಧಿಕಾರಿ ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬೀಜಿಂಗ್ ಅನ್ನು ಪ್ರತಿನಿಧಿಸುವ ನಿರೀಕ್ಷೆಯಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜಿ20 ಶೃಂಗಸಭೆಗೆ ಹಾಜರಾಗುವ ವಿಷಯದ ಬಗ್ಗೆ ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಸುದ್ದಿ ಓದಿದ್ದೀರಾ? ಅಸ್ಸಾಂ | ಬ್ರಹ್ಮಪುತ್ರ ನದಿ ನೀರಿನ ಮಟ್ಟ ಏರಿಕೆ; ಸಂಕಷ್ಟದಲ್ಲಿ 22 ಜಿಲ್ಲೆಯ 3.40 ಲಕ್ಷ ಮಂದಿ
ಶೃಂಗಸಭೆ ಸಂದರ್ಭದಲ್ಲಿಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಜಿನ್‌ಪಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ಜಿನ್‌ಪಿಂಗ್ ಅವರು ಶೃಂಗದಲ್ಲಿ ಭಾಗಿಯಾಗುವುದನ್ನು ಖಚಿತಪಡಿಸುವ ಯಾವುದೆ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅವರಿಗೆ ಸೋಮವಾರ ಕರೆ ಮಾಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಸಭೆಯಲ್ಲಿ ತಾವು ಪಾಲ್ಗೊಳ್ಳದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ.
ಕಳೆದ ನವೆಂಬರ್‌ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಮೆರಿಕ ಅಧ್ಯಕ್ಷ ಬಿಡೆನ್ ಅವರನ್ನು ಕೊನೆಯ ಬಾರಿ ಭೇಟಿಯಾದರು.