ರಾಯಚೂರಿನ ಬೆಟ್ಟದೂರು ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಕಾರಿನ ಮೇಲೆ ಹಾಡಹಗಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಪಾಟೀಲ್ ಅವರು ಪ್ರಾಯಾಪಾಯದಿಂದ ಪಾರಾಗಿದ್ದಾರೆ.
ರಾಯಚೂರಿನಿಂದ ಮಾನ್ವಿಗೆ ಪಾಟೀಲ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ನಗರದ ಹೊರವಲಯ ಏಳಮೈಲ್ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನ ಬಾನಟ್‌ಗೆ ಗುಂಡು ತಗುಲಿದೆ. ಪಾಟೀಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ರಾಯಚೂರು ಎಸ್‌ಪಿ ನಿಖಿಲ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.