ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಸ್ಥಳದಿಂದ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ವಿನಯ್ ಶ್ರೀವಾಸ್ತವ ಹತ್ಯೆಯಾಗಿರುವ ವ್ಯಕ್ತಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತ ವಿಕಾಸ್ ಶ್ರೀವಾಸ್ತವ, ಸಚಿವ ಕೌಶಲ್ ಕಿಶೋರ್ ಅವರ ಮಗನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ನಂತರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ಸೇರಿದಂತೆ ಭಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ್ ತಿಮ್ಮಯ್ಯ ವಜಾ
ಬೇಗೇರಿಯ ನಿವಾಸಿ ವಿನಯ್ ಶ್ರೀವಾಸ್ತವ್ ಬಿಜೆಪಿ ಕಾರ್ಯಕರ್ತ, ಕೇಂದ್ರ ಸಚಿವರ ಪುತ್ರ ವಿಕಾಸ್ ಕಿಶೋರ್ ಜತೆ ವಾಸವಿದ್ದರು. ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ವಿನಯ್ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೃತದೇಹ ಹಾಸಿಗೆ ಬಳಿ ನೆಲದ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ಅಜಯ್ ರಾವತ್, ಅಂಕಿತ್ ಶರ್ಮಾ, ಶಮೀಮ್ ಬಾಬಾ, ಬಂಟಿ ಮತ್ತು ಇನ್ನಿಬ್ಬರು ಅಪರಿಚತರು ಸ್ಥಳದಲ್ಲಿದ್ದರು.