ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ: ಸಿಎಂ, ಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದ ಡಿಸಿಎಂ ಡಿಕೆ

Date:

Advertisements
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ
  • ‘ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ’

ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳ ಸಂಚಾರ ಇಲ್ಲ. ಅಂತಹ ಜೆಲ್ಲೆಗಳಲ್ಲಿ ಖಾಸಗಿ ಬಸ್​​ಗಳ ಸಂಚಾರ ಹೆಚ್ಚು ಇದೆ. ಇಂತಹ ಕಡೆಗಳಲ್ಲಿ ಏನಾದರೂ ಉಪಾಯ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ ನೀಡಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಖಾಸಗಿ ಸಾರಿಗೆಯಲ್ಲಿ ಯಾರೂ ಹೋಗುತ್ತಿಲ್ಲ ಎಂಬುದು ಗೊತ್ತಾಗಿದೆ. ಇದಕ್ಕೆ ಒಂದು ಉಪಾಯ ಕಂಡು ಹಿಡಿಯಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುತ್ತೇನೆ” ಎಂದರು.

ಸಚಿವರ ವಿರುದ್ಧ ಕಾಂಗ್ರೆಸ್​ನ ಕೆಲ ಶಾಸಕರ ಅಸಮಾಧಾನ ಹೊರಹಾಕಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಯಾವ ಶಾಸಕರೂ ಅಸಮಾಧಾನ ಹೊರಹಾಕಿಲ್ಲ. ಎಲ್ಲ ನೀವೇ ಕ್ರಿಯೆಟ್ ಮಾಡುತ್ತಿದ್ದೀರಿ. ನಮ್ಮ ಪಕ್ಷದಲ್ಲಿ ಶಿಸ್ತು ಇದೆ. ಶಾಸಕರು ತಮ್ಮ ನೋವನ್ನು ತೋಡಿಕೊಳ್ಳಬಾರದಾ? ಅದರಲ್ಲಿ ತಪ್ಪೇನಿದೆ? ಯಾವ ತಪ್ಪೂ ಇಲ್ಲ” ಎಂದು ಹೇಳಿದರು.

Advertisements

ಆದಿತ್ಯ ಎಲ್-1 ಉಡ್ಡಯನಕ್ಕೆ ಶುಭ ಹಾರೈಕೆ

ಇಸ್ರೋದಿಂದ ಆದಿತ್ಯ ಎಲ್-1 ಉಡಾವಣೆ ಹಿನ್ನೆಲೆ ಇಸ್ರೋಗೆ ಡಿಕೆ ಶಿವಕುಮಾರ್ ಶುಭ ಹಾರೈಸಿದರು. “ಕರ್ನಾಟಕದಿಂದ ಭಾರತಕ್ಕೆ ಗೌರವ ತರುವ ಕೆಲಸ ನಮ್ಮ ಇಸ್ರೋ ಮಾಡುತ್ತಿದೆ. ದೊಡ್ಡ ಪ್ರಯೋಗ, ಪ್ರಯತ್ನ, ಸಾಹಸ ಎಲ್ಲವನ್ನೂ ಕೂಡ ಮಾಡುತ್ತಿದೆ. ಯಶಸ್ಸು ಸಿಗಲಿ ಎಂದು ನಾನು ಶುಭ ಹಾರೈಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X