ಬಿಬಿಎಂಪಿ ಅಗ್ನಿ ಅವಘಡ | ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರರಾಗಿದ್ದ ಸಿ.ಎಂ ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಪಾಲಿಕೆ ಕೇಂದ್ರ ಕಚೇರಿ ಆವರಣದ ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ಶ್ರದ್ಧಾಂಜಲಿ ಸಮರ್ಪಣಾ ಕಾರ್ಯಕ್ರಮ ನಡೆಯಿತು.

ಶಿವಕುಮಾರ್ ಅವರ ಭಾವಚಿತ್ರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಮರ್ಪಿಸಿದರು.

ಈ ವೇಳೆ ಮಾತನಾಡಿದ ಅವರು, “ಬಿಬಿಎಂಪಿ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇದು ತುಂಬಾ ಶೋಚನೀಯ ವಿಷಯವಾಗಿದ್ದು, ಅತ್ಯಂತ ನೋವು ತರುವಂತಹ ವಿಚಾರವಾಗಿದೆ. ಬೆಂಕಿ ಅವಘಡ ನಡೆದು ಈ ದುರಂತ ಸಂಭವಿಸಿದೆ. ಇದು ಅತ್ಯಂತ ನೋವು ತಂದಂತಹ ವಿಚಾರ. ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಉಳಿದ ಎಂಟು ಸಹೋದ್ಯೋಗಿಗಳು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿಯಲ್ಲಿ ಕೆಲಸ ಮಾಡುವ ಅಧಿಕಾರ ಮತ್ತು ಸಿಬ್ಬಂದಿ ಪ್ರಾಣದ ಬಗ್ಗೆ ಯೋಚನೆ ಮಾಡದೆ, ಸಂದರ್ಭಕ್ಕನುಗುಣವಾಗಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಾರೆ. ಅಗ್ನಿ ಅವಘಡದ ಸಮಯದಲ್ಲಿ ಜಾಸ್ತಿ ಹೊಗೆ ಸೇವನೆಯಾಗಿರುವುದರಿಂದ ಜೀವಕ್ಕೆ ಕುತ್ತು ಬಂದಿದೆ” ಎಂದರು.

Advertisements

“ಶಿವಕುಮಾರ್ ರವರ ನಿಧನದ ಹಿನ್ನೆಲೆ ಉಪ ಮುಖ್ಯಮಂತ್ರಿ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದು, ಅದರಂತೆ ಕೂಡಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು” ಎಂದು ಹೇಳಿದರು.

“ಶಿವಕುಮಾರ್ ಅವರನ್ನು ಉಳಿಸಿಕೊಳ್ಳಲು‌ ಸಾಕಷ್ಟು ಪ್ರಯತ್ನ ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲಾ ಅಗಲಿದ್ದಾರೆ. ಶಿವಕುಮಾರ್ ಅಗ್ನಿ ಅವಘಡದ ಸಂದರ್ಭದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಸ್ಥಳದಲ್ಲಿದ್ದ ಅಧಿಕಾರಿ/ಸಿಬ್ಬಂದಿಯನ್ನು ಕಾಪಾಡಲು‌ ಮುಂದಾಗಿ, ಕೊನೆಯದಾಗಿ ಅವರು ಹೊರ ಬಂದಿದ್ದಾರೆ. ಅವರಿದ್ದ ಸ್ಥಾನದ ಜವಾಬ್ದಾರಿಯನ್ನು ಅರಿತು ನಾಯಕನ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ” ಎಂದರು.

ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸದ ನೆರವಿಗಾಗಿ ₹95.5 ಲಕ್ಷ ಮೊತ್ತ ಹಣಕಾಸು ನೆರವು

“ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ದರ್ಜೆಯ ನೌಕರರ ವೇತನದಲ್ಲಿ ಹಣವನ್ನು ಕಟಾವು ಮಾಡಿ ಸುಮಾರು ₹95.5 ಲಕ್ಷ ಹಣವನ್ನು ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಅತಿ ಶೀಘ್ರದಲ್ಲಿ ಚೆಕ್ ಅನ್ನು ಹಸ್ತಾಂತರ ಮಾಡಲಾಗುವುದು” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧ ಸಂಘದ ಅಧ್ಯಕ್ಷ ಅಮೃತ್ ರಾಜ್ ರವರು ತಿಳಿಸಿದರು.

“ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ ದರ್ಜೆ ಶ್ರೇಣಿಯ ಅಧಿಕಾರಿಗಳಿಂದ ₹3,000, ಬಿ ದರ್ಜೆ ಶ್ರೇಣಿಯ ನೌಕರರಿಂದ ₹2,000, ಸಿ ದರ್ಜೆ ಶ್ರೇಣಿಯ ನೌಕರರಿಂದ ₹1,500, ಹಾಗೂ ಡಿ ದರ್ಜೆ ಶ್ರೇಣಿಯ ನೌಕರರಿಂದ ₹1,000 ಮೊತ್ತವನ್ನು ವೇತನದಲ್ಲಿ‌ ಕಟಾವು ಮಾಡಿ ಸುಮಾರು ₹95.5 ಲಕ್ಷ ಹಣವನ್ನು ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಚೆಕ್ ಅನ್ನು ಹಸ್ತಾತರಿಸಲಾಗುವುದು” ಎಂದು ತಿಳಿಸಿದರು.

“ಶಿವಕುಮಾರ್ ರವರ ಸವಿನೆನಪಿಗಾಗಿ ಎಲ್ಲ ರೀತಿಯ ಸೌಲಭ್ಯವುಳ್ಳ 2 ಆಂಬ್ಯುಲೆನ್ಸ್ ಗಳನ್ನು ಬಿಬಿಎಂಪಿ ನೌಕರರ ಸಹಕಾರ ಸಂಘ ಹಾಗೂ ಬಿಬಿಎಂಪಿ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎರಡು ತಿಂಗಳಲ್ಲಿ ಪಾಲಿಕೆಗೆ ಉಚಿತವಾಗಿ ಹಸ್ತಾಂತರಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್‌ ವಿರುದ್ಧ ವಂಚನೆ ಆರೋಪ; ದೂರು ದಾಖಲು

ಈ ವೇಳೆ ವಿಶೇಷ ಆಯುಕ್ತರುಗಳಾದ ಡಾ. ತ್ರಿಲೋಕ್ ಚಂದ್ರ, ಆರ್.ಎಲ್ ದೀಪಕ್, ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರಹ್ಲಾದ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X