‌ಉಡುಪಿ | ನನ್ನ ರಾಜಕೀಯ ಜೀವನದಲ್ಲಿ ಪ್ರಮುಖ ಪಾತ್ರ ಸಹಕಾರಿ ಕ್ಷೇತ್ರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ನನ್ನ ರಾಜಕೀಯದ ಏಳಿಗೆಯ ಹಿಂದೆ ಸಹಕಾರಿ ಕ್ಷೇತ್ರದ ಪಾತ್ರ ಪ್ರಮುಖವಾದದ್ದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

“ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ಸಹಕಾರ ತತ್ವ ಅತ್ಯಂತ ಬಲವಾಗಿ ಬೇರೂರಿದೆ. ಇಡೀ ದೇಶವೇ ಸಹಕಾರ ತತ್ವದ ಮೇಲೆ ನಿಂತಿದೆ” ಎಂದು ಹೇಳಿದರು.

Advertisements

“ಸಹಕಾರ ಸಂಘಗಳು ಬೆಳೆದಷ್ಟು ಆರ್ಥಿಕ ಚಟುವಟಿಕೆಗಳು ಬೆಳೆಯುತ್ತವೆ. ರಾಜ್ಯ, ದೇಶ ಬೆಳೆಯುತ್ತವೆ. ನಾಯಕತ್ವ ಗುಣ ಬೆಳೆಸುವ ತಾಕತ್ತು ಸಹಕಾರಿ ಸಂಘಗಳಿಗಿದೆ” ಎಂದು ಹೇಳಿದರು.

“ನಾನೂ ಸೇರಿದಂತೆ ರಾಜ್ಯದ ಬಹುತೇಕ ರಾಜಕಾರಣಿಗಳು ಸಹಕಾರ ಸಂಘಗಳ ಮೂಲಕವೇ ಬೆಳೆದು ಬಂದವರು. ನಾನು ಸಹಕಾರಿ ಸಕ್ಕರೆ ಕಾರ್ಖಾನೆಯೊಂದರ ನಿರ್ದೇಶಕಿಯಾಗಿ, ಅಲ್ಲಿಂದಲೇ ಗುರುತಿಸಿಲ್ಪಟ್ಟವಳು. ಈಗಲೂ ಸಹಕಾರ ಸಂಘವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದ್ದೇನೆ” ಎಂದು ಸಚಿವರು ಹೇಳಿದರು.

“ಸಹಕಾರ ಸಂಘ ಬೆಳೆಯುವುದಕ್ಕೆ ಜನರ ವಿಶ್ವಾಸ ಮುಖ್ಯ. ಸಹಕಾರ ಸಂಘಗಳು ಒಮ್ಮೆ ಜನರ ವಿಶ್ವಾಸವನ್ನು ಕಳೆದುಕೊಂಡರೆ ಮತ್ತೆ ಗಳಿಸಿಕೊಳ್ಳುವುದು ಕಷ್ಟ. ಹಾಗಾಗಿ ಪ್ರಾಮಾಣಿಕ ಸದಸ್ಯರು ಮುಖ್ಯ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕೃಷಿ ಕೂಲಿಕಾರರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹ

“ಉಡುಪಿ ಜಿಲ್ಲೆಯಲ್ಲಿ ಸಹಕಾರ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆಯೆಂದು ಕೇಳಿದ್ದೇನೆ. ಸಹಕಾರ ಚಳವಳಿ ಜಿಲ್ಲೆಯಲ್ಲಿ ಗಟ್ಟಿಯಾಗಿ ಬೇರೂರಿದೆಯೆಂದು ತಿಳಿದುಕೊಂಡಿದ್ದೇನೆ. ಎಲ್ಲರೂ ಸೇರಿ ಸಹಕಾರ ತತ್ವವನ್ನು ಇನ್ನಷ್ಟು ಗಟ್ಟಿಗೊಳಿಸೋಣ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ನಬಾರ್ಡ್‌ನ ಮುಖ್ಯ ಮಹಾ ಪ್ರಬಂಧಕ ಟಿ ರಮೇಶ್, ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು ಸೇರಿದಂತೆ ಹಲವು ಮಂದಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X