ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಧಾನಿ ಪಕ್ಷದ ಸಾಧನೆ ಎಂದಿರುವುದು ವಿಷಾದನೀಯ : ಸಿದ್ದರಾಮಯ್ಯ

Date:

Advertisements
  • ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
  • ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ ಎಂದ ಸಿದ್ದರಾಮಯ್ಯ

“ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ” ಎಂದು ಪ್ರಧಾನಿಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಆದಿತ್ಯ ಎಲ್-1 ಉಡಾವಣೆಯ ಬಳಿಕ ಶನಿವಾರ ಸಂಜೆ ಸರಣಿ ಟ್ವೀಟ್ ಮಾಡಿರುವ ಅವರು, “ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು. ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ ಎಂದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

“ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿರುವ ಸಿಎಂ, ಇನ್ನಾದರೂ ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ? ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ? ಹೇಳಿ ಎಂದು ಎನ್‌ಡಿಎ ಸರ್ಕಾರದ ಸಾಧನೆಯ ಬಗ್ಗೆ ತಿಳಿಸುವಂತೆ ಸವಾಲೆಸೆದಿದ್ದಾರೆ.

Advertisements

“ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಭತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯುವುದಿಲ್ಲ ನರೇಂದ್ರ ಮೋದಿಯವರೇ” ಎಂದು ಟ್ವೀಟ್ ಮಾಡುವ ಮೂಲಕ ಪ್ರಧಾನಿಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಪ್ರಹಾರ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X