ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂತೆ; ನಿರ್ಮೂಲನೆ ಮಾಡಬೇಕು: ವಿವಾದದ ಕಿಡಿ ಹೊತ್ತಿಸಿದ ಉದಯನಿಧಿ ಸ್ಟಾಲಿನ್

Date:

Advertisements
  • ‘ಸನಾತನ ಧರ್ಮ ಪಾಲಿಸುವ 80 ಶೇ.ಜನರ ನರಮೇಧಕ್ಕೆ ಕರೆ’ ಎಂದು ಆರೋಪಿಸಿದ ಬಿಜೆಪಿ
  • ಡಿಎಂಕೆ ಸಚಿವ ಹಾಗೂ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌

“ಸನಾತನ ಧರ್ಮ ಎಂಬುದು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂದು ತಮಿಳುನಾಡಿನ ಸಚಿವ, ಸಿಎಂ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿಕೆ ನೀಡಿದ್ದು, ವಿವಾದದ ಕಿಡಿ ಹೊತ್ತಿಸಿದೆ.

ಚೆನ್ನೈನಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ, ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಸ್ಟಾಲಿನ್‌ ಅವರ ಈ ಹೇಳಿಕೆಗೆ, ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Advertisements

ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿರುವ ಬಲಪಂಥೀಯ ಸಂಘಟನೆಯ ಹಲವರು, ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕರೆ ನೀಡಿದ್ದಾರೆ.

“ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್’ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನವು ಈ ನರಮೇಧದ ಕರೆಗೆ ಬೆಂಬಲವಾಗಿದೆ. ಭಾರತ ಒಕ್ಕೂಟವು ಅದರ ಹೆಸರಿಗೆ ನಿಜವಾದ ಅವಕಾಶವನ್ನು ನೀಡಿದರೆ, ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ. ಅದು I.N.D.I.A” ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಉದಯನಿಧಿ ಸ್ಟಾಲಿನ್ ವಿಡಿಯೋ ಹಂಚಿಕೊಂಡಿರುವ ಅಮಿತ್ ಮಾಳವೀಯ, ಸನಾತನ ಧರ್ಮ ಪಾಲಿಸುವ 80 ಶೇ.ಜನರ ನರಮೇಧಕ್ಕೆ ಕರೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ” ಎಂದು ತಮ್ಮ ಹೇಳಿಕೆಯ ಪ್ರತಿಯೊಂದು ಪದವನ್ನು ಸಮರ್ಥಿಸುತ್ತೇನೆ ಎಂದು ಹೇಳಿದ್ದಾರೆ.

“ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಹೇಳಿದ ಅಂಶಗಳನ್ನು ಪುನರುಚ್ಚರಿಸುತ್ತೇನೆ. ಕೋವಿಡ್-19, ಸೊಳ್ಳೆಗಳಿಂದ ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ” ಎಂದು ಉದಯ ನಿಧಿ ಸ್ಟ್ಯಾಲಿನ್ ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X