ಭಾರತ್‌ ಜೋಡೋಗೆ ಒಂದು ವರ್ಷ: ಸೆ.07ರಂದು ದೇಶಾದ್ಯಂತ ಜಿಲ್ಲಾ ಮಟ್ಟದ ಯಾತ್ರೆ

Date:

Advertisements

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ.7ರಂದು ದೇಶಾದ್ಯಂತ ಜಿಲ್ಲಾಮಟ್ಟದಲ್ಲಿ ಯಾತ್ರೆ ನಡೆಸಲು ಪಕ್ಷ ತೀರ್ಮಾನಿಸಿದೆ.

2023ರ ಸೆಪ್ಟೆಂಬರ್ 7 ರಂದು ದೇಶದ ಎಲ್ಲ ಜಿಲ್ಲೆಯಲ್ಲಿ ಭಾರತ್ ಜೋಡೊ ಯಾತ್ರೆ ಆಯೋಜಿಸಲು ಕಾಂಗ್ರೆಸ್ ಯೋಜಿಸಿದೆ. ಯಾತ್ರೆಯ ವರ್ಷಾಚರಣೆ ಪ್ರಯುಕ್ತ ಕಾಂಗ್ರೆಸ್ ವಿಶೇಷ ಯಾತ್ರೆ ಹಮ್ಮಿಕೊಂಡಿದೆ. ಸೆ. 7 ರಂದು ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಎಲ್ಲ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 7 ರಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದರು. 130 ದಿನಗಳ ಅಭೂತಪೂರ್ವ ಯಾತ್ರೆಯಲ್ಲಿ 12 ರಾಜ್ಯಗಳಲ್ಲಿ ಹಾದು ಹೋಗಿತ್ತು. ಕನ್ಯಾಕುಮಾರಿಯಿಂದ ಆರಂಭಗೊಂಡು, ಕಾಶ್ಮೀರದಲ್ಲಿ ಅಂತ್ಯಗೊಂಡಿತ್ತು. ಜನವರಿ 30, 2023ರವರೆಗೆ ಈ ಯಾತ್ರೆ ನಡೆದಿತ್ತು.

Advertisements

ಈ ಸುದ್ದಿ ಓದಿದ್ದೀರಾ? ‘ಒಂದು ರಾಷ್ಟ್ರ, ಒಂದು ಚುನಾವಣೆ’| ದೇಶದ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ: ರಾಹುಲ್ ಗಾಂಧಿ

ಇನ್ನು ಎರಡನೇ ಆವೃತ್ತಿಯ ಭಾರತ ಒಗ್ಗೂಡಿಸುವ ಯಾತ್ರೆಯನ್ನು ಕಾಂಗ್ರೆಸ್ ಶೀಘ್ರದಲ್ಲೇ ಆರಂಭಿಸಲು ತಯಾರಿ ನಡೆಸುತ್ತಿದೆ. ಈ ಯಾತ್ರೆ ಗುಜರಾತ್‌ನಿಂದ ಆರಂಭಗೊಳ್ಳಲಿದ್ದು, ಮೆಘಾಲಯ,  ಮಣಿಪುರ , ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ಸಂಚರಿಸಲಿ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಇತ್ತೀಚಿಗೆ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X