- ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
- ಮನವಿಗೆ ಕ್ಯಾರೇ ಎನ್ನದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕಾಳು ಕಟ್ಟುವ ಹಂತದಲ್ಲಿದ್ದ ಜೋಳದ ಬೆಳೆಗೆ ನುಗ್ಗಿದ ಕರಡಿ ಹಾಗೂ ಹಂದಿಗಳ ಹಿಂಡು ಸಂಪೂರ್ಣ ಬೆಳೆ ನೆಲಕ್ಕುರಳಿಸಿವೆ.
ಗ್ರಾಮದ ಮಲಿಯಪ್ಪ ಎಂಬವರಿಗೆ ಸೇರಿದ ಒಂದು ಎಕರೆಯಲ್ಲಿ ಬೆಳೆದ ಜೋಳ ಕಾಡುಪ್ರಾಣಿಗಳು ನಾಶಪಡಿಸಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತ ಕಂಗಲಾಗಿದ್ದಾನೆ.
ರೈತ ಮಲಿಯಪ್ಪ ಈದಿನ.ಕಾಮ್ ದೊಂದಿಗೆ ಮಾತನಾಡಿ, “ಕಳೆದ 15 ದಿನಗಳಿಂದ ಗ್ರಾಮದ ಹಲವು ರೈತರ ಜಮೀನುಗಳಿಗೆ ಕರಡಿ ಮತ್ತು ಕಾಡು ಹಂದಿಗಳ ಗುಂಪು ದಾಳಿ ಮಾಡಿ ಬೆಳೆ ನಾಶಪಡಿಸುತ್ತಿವೆ. ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಜೆಯಾದರೆ ಸಾಕು ಕಾಡುಪ್ರಾಣಿಗಳು ಜಮೀನುಗಳಿಗೆ ದಾಳಿಯಿಡುತ್ತಿವೆ, ಕೂಡಲೇ ಅರಣ್ಯ ಇಲಾಖೆ ಎಚ್ಚೆತುಕೊಂಡು ಬೆಳೆ ನಾಶಪಡಿಸುವುದನ್ನು ತಪ್ಪಿಸಿ ರೈತರ ಬೆಳೆ ರಕ್ಷಣೆಗೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಏರ್‌ಲೈನ್ಸ್ ಹಗಲುಗನಸಿನಿಂದ ರಾಜ್ಯ ಸರ್ಕಾರ ಹಿಂದೆ ಸರಿಯಲಿ
ಮಳೆಯಿಲ್ಲದೆ ಕಂಗಾಲಾದ ರೈತನಿಗೆ ಕಾಡು ಪ್ರಾಣಿಗಳ ಹಾವಳಿಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.