ಗದಗ | ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣ ಉದ್ಘಾಟನೆ

Date:

Advertisements

ಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಬಳಸಿಕೊಂಡು ಎಲ್ಲೂ ಟರ್ಫ್‌ ನಿರ್ಮಾಣ ಮಾಡಿಲ್ಲ. ಕಲ್ಲು, ಮಣ್ಣಿನಲ್ಲಿ ಆಡುತ್ತಿದ್ದ ಯುವಕರು ಇಂದು ಟರ್ಫ್ ಗ್ರೌಂಡ್‌ನಲ್ಲಿ ಆಡುವ ಸುಯೋಗ ಒದಗಿ ಬಂದಿದೆ. ಗದಗ ಯುವಕರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಕಿ ತಂಡವನ್ನು ಪ್ರತಿನಿಧಿಸಿದ್ದಾರೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ ಸಚಿವ ಡಾ. ಎಚ್‌.ಕೆ ಪಾಟೀಲ್ ಹೇಳಿದ್ದಾರೆ.

ಗದಗ-ಬೆಟಗೇರಿಯ ಗಾಂಧಿ ನಗರದ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಅವರು ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಅಂತಾರಾಷ್ಟ್ರೀಯ ಹಾಕಿ ಕ್ರೀಡಾಪಟು  ರಾಜು ಬಗಾಡೆ, ಹರೀಶ ಮುಟಗಾರ, ಹಿರಿಯ ಹಾಕಿ ಕ್ರೀಡಾಪಟು ಹನುಮಂತಪ್ಪ ವೀರಾಪೂರ, ಗಂಗಣ್ಣ ಕೋಟಿ, ರಘುನಾಥಸಾ ಶಿದ್ಲಿಂಗ್,  ಯಲ್ಲಪ್ಪ ಗಡಾದ, ಯಲ್ಲಪ್ಪ ಕೊರವರ, ವಿ.ಎಸ್. ಮಣಿ, ಕಾರ್ಲಟನ್ ಗೋಮ್ಸ್ ಅವರನ್ನು ಸನ್ಮಾನಿಸಿದರು.

Advertisements

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ, ಮಾಜಿ ಶಾಸಕ ಡಿ.ಆರ್.ಪಾಟೀಲ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ವಿ.ಎಸ್.ಪಾಟೀಲ ಉಪಸ್ಥಿತಿ ವಹಿಸಿದ್ದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X