ರಾಯಚೂರು | ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಸ್ಲಂ ನಿವಾಸಿಗಳ ಆಗ್ರಹ

Date:

Advertisements
  • ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನಿಗದಿಗೊಳಿಸಬೇಕು.
  • ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

ವಿಧಾನಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯ ಮುಖಂಡರು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಅವರು, “ನಗರ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಬೇಕು. ಕರ್ನಾಟಕ ಸಮಗ್ರ ಸ್ಲಂ ಅಭಿವೃದ್ದಿ ಕಾಯ್ದೆ 2018ರ ಕರಡು ಜಾರಿಗೊಳಿಸಬೇಕು. ವಸತಿ ಹಕ್ಕು ಕಾಯ್ದೆ ಜಾರಿಗೊಳಿಸಬೇಕೆಂದು” ಆಗ್ರಹಿಸಿದರು.

“ಸ್ಲಂ ನಿವಾಸಿಗಳ ಜನಸಂಖೈಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನಿಗದಿಗೊಳಿಸಬೇಕು. ಸ್ಲಂ ನಿವಾಸಿಗಳಿಗೆ ಭೂ ಒಡೆತನ ನೀಡಬೇಕು. ನಗರ ಲ್ಯಾಂಡ್ ಬ್ಯಾಂಕ್ ಯೋಜನೆ ಜಾರಿಗೊಳಿಸಬೇಕು. ಸರ್ಕಾರ ಅಥವಾ ಸ್ಲಂ ಜನರೇ ವಸತಿ ನಿರ್ಮಾಣ ಮಾಡುವ ಸಿಎಂ ಹೌಸಿಂಗ್ ಜಾರಿಗೊಳಿಸಬೇಕು. ಸ್ಲಂ ನಿವಾಸಿಗಳ ಪ್ರತ್ಯೇಕ ಸಚಿವಾಲಯ ರಚಿಸಬೇಕು. ಸ್ಲಂ ನಿವಾಸಿಗಳ ಅಭಿವೃದ್ದಿಗೆ ನಿಗಮ ಮಂಡಳಿ ಸ್ಥಾಪಿಸಬೇಕೆಂದು” ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ ? ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡದಿರಿ; ಅಧಿಕಾರಿಗಳಿಗೆ ಶಾಸಕಿ ಕರೆಮ್ಮ ಸೂಚನೆ

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಕಾರ್ಯದರ್ಶಿ ನೂರ್‌ಜಾನ್, ಮುಖಂಡರಾದ ಬಸವರಾಜ, ರಾಜಶೇಖರ್, ಮಹೇಶ, ಮಾಧವರೆಡ್ಡಿ, ವಿರೇಶ ಕೇಬಲ್ ಆಪರೇಟರ್, ಜಂಬಣ್ಣ ಡೊಕ್ಕ, ಫಕೃದ್ದೀನ್, ಜಿ.ರಾಜು, ನಾಗರಾಜ ಪೋತಗಲ್ ಸೇರಿದಂತೆ ಅನೇಕರಿದ್ದರು.

ವರದಿ : ಹಫೀಜುಲ್ಲಾ, ಸಿಟಿಜನ್‌ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X