ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಮಹಿಳೆಗೆ ಸಿಎಂ ಸಿದ್ದರಾಮಯ್ಯ ನಮಸ್ಕಾರ

Date:

Advertisements
  • ‘ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಸಮಾಗಮ’
  • ಸಂಗವ್ವ ಭೇಟಿ ನನ್ನಲ್ಲಿ ಸಾರ್ಥಕ್ಯದ ಭಾವ ಮೂಡಿಸಿದೆ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದ ಸಂದರ್ಭದಲ್ಲಿ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಮುಗಿದು ನಮಸ್ಕರಿಸಿದ್ದಾರೆ.

ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಆ ಮಹಿಳೆಯನ್ನು ಭೇಟಿಯಾಗಿ ಆತ್ಮೀಯತೆಯಿಂದ ಮಾತನಾಡಿಸಿ ಧನ್ಯವಾದ ತಿಳಿಸಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌) ನಲ್ಲಿ ಮಾಹಿತಿ ಹಂಚಿಕೊಡಿದ್ದಾರೆ.

“ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು” ಎಂದು ಬರೆದುಕೊಂಡಿದ್ದಾರೆ.

Advertisements

“ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂತಹದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ವಾಹಿನಿಗೆ ಧನ್ಯವಾದಗಳು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X