ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ: ಸಿಎಂ ಸಿದ್ದರಾಮಯ್ಯ

Date:

Advertisements
  • ತಂತ್ರಜ್ಞಾನದ ಅಭಿವೃದ್ಧಿ ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ
  • ಸಂಚಾರ ದಟ್ಟಣೆ ನಿವಾರಿಸಲು ಮೆಟ್ರೋ ಸಂಪರ್ಕ ಜಾಲ ಶೀಘ್ರವಾಗಿ ವಿಸ್ತರಿಸುತ್ತೇವೆ

ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ. ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ ಬೆಂಗಳೂರು ಟೆಕ್ ಸಮ್ಮಿಟ್ ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಟೆಕ್ ಸಮ್ಮಿಟ್ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವ್ಯಾಖ್ಯಾನಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ” ಎಂದರು.

“80ರ ದಶಕದ ಅಂತ್ಯ ಹಾಗೂ 90ರ ದಶಕದಲ್ಲಿಯೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಟಿ/ಬಿಟಿ ಗೆ ಭದ್ರ ಬುನಾದಿಯನ್ನು ಹಾಕಿತ್ತು. ನೀತಿ ನಿರೂಪಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊತ್ತಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ 1992ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು” ಎಂದು ಹೇಳಿದರು.

Advertisements

ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಸಮರ್ಥ

“ಬೆಂಗಳೂರು ಐಟಿ ರಾಜಧಾನಿಯಾಗಿದ್ದು ಮೂಲಸೌಕರ್ಯಗಳನ್ನು ಹೊಂದಿದೆ. ಬೆಂಗಳೂರು ಐಟಿ/ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲಾ ಸಾಮರ್ಥ್ಯವನ್ನು ಹೊಂದಿದ್ದು ನಮ್ಮ ಸರ್ಕಾರ ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ. ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು ಅತ್ಯಂತ ಸೂಕ್ತವಾಗಿದೆ” ಎಂದು ತಿಳಿಸಿದರು.

“ಐಒಟಿ, ಕೃತಕ ಬುದ್ದಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ. ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕೃಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

“ಉದ್ಯಮಶೀಲತೆ ಹಾಗೂ ಶಿಕ್ಷಣವನ್ನು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ರೂಪಸಿ ಭವಿಷ್ಯದ ಬೇಡಿಕೆಗಳನ್ನು ಪರಿಣಾಮಕಾರಿಯಾಗಿ ಪೂರೈಸುವಂತೆ ಮಾಡಲಾಗಿದೆ. ಕೌಶಲಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ರಚಿಸಿದ ಮೊದಲ ರಾಜ್ಯ ಕರ್ನಾಟಕ. ಸಂಬಂಧಪಟ್ಟ ಎಲ್ಲಾ ಪಾಲುದಾರರ ಸಹಯೋಗದೊಂದಿದೆ ಕೌಶಲ್ಯ ಮಂಡಳಿ ರಚನೆಯತ್ತಲೂ ನಮ್ಮ ರಾಜ್ಯ ಕಾರ್ಯನಿರ್ವಹಿಸುತ್ತಿದೆ. ಉದ್ಯಮ ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಲಿದೆ” ಎಂದರು.

“ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದ ಸಹಯೋಗದಲ್ಲಿ ಭವಿಷ್ಯಕ್ಕೆ ಸಿದ್ದರಾಗಿರುವ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ನೆರವಾಗಲಿದೆ. ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ, ಸೈಬರ್ ಸೆಕ್ಯೂರಿಟಿ ಮುಂತಾದ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ನಮ್ಮ ಶಕ್ತಿಯನ್ನು ಬಳಸಲು ನಾವು ಬದ್ಧರಾಗಿದ್ದೇವೆ” ಎಂದು ಭರವಸೆ ನೀಡಿದರು.

“ನಾವೀನ್ಯತಾ ವಲಯದಲ್ಲಿ ಸ್ಟಾರ್ಟ್ ಅಪ್ ಹಾಗೂ ಯುವ ಸಂಸ್ಥೆಗಳು ಜೀವನಾಡಿಯಾಗಿವೆ. ಈ ವಲಯದ ಬೆಳವಣಿಗೆಗೆ ಅಗತ್ಯವಿರುವ ಅನುದಾನ ಹಾಗೂ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ. ತಂತ್ರಜ್ಞಾನ ನಾಯಕತ್ವದಲ್ಲಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಿ, ನಾವೀನ್ಯತೆ ಹಾಗೂ ಸುಸ್ಥಿರ ಐಟಿ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿ. ಈ ಕುರಿತಂತೆ ಸಲಹೆ ಹಾಗೂ ಸಂವಾದಗಳನ್ನು ಕೈಗೊಳ್ಳಲು ಕರ್ನಾಟಕಕ್ಕಿಂತಲೂ ಉತ್ತಮವಾದ ರಾಜ್ಯವಿಲ್ಲ” ಎಂದರು.

ಮೆಟ್ರೋ ಸಂಪರ್ಕ ಜಾಲ ಶೀಘ್ರ ವಿಸ್ತರಣೆ

“ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು, ವಿಮಾನನಿಲ್ದಾಣಕ್ಕೆ ಮೆಟ್ರೋ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X