ಬರಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ: ಆಹಾರ ಸಚಿವ ಕೆ ಎಚ್​ ಮುನಿಯಪ್ಪ

Date:

Advertisements
  • ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳು ಒಪ್ಪಿಗೆ ಸೂಚಿಸಿವೆ ಎಂದ ಸಚಿವ
  • 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಎಂದ ಮುನಿಯಪ್ಪ

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿದ ಸಚಿವ ಕೆ ಎಚ್​ ಮುನಿಯಪ್ಪ, “ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್​​ಗಢ ಸರ್ಕಾರಗಳು ಅಕ್ಕಿ ನೀಡಲು ಮುಂದೆ ಬಂದಿವೆ. ಒಂದು ವಾರದಲ್ಲಿ ಅಕ್ಕಿ ಖರೀದಿ ಅಂತಿಮವಾಗಲಿದೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೊಡುವ ಕೆಲಸ ಮಾಡುತ್ತೇವೆ” ಎಂದರು.

114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದ ಸಚಿವ, ಈ ಎಲ್ಲ ತಾಲೂಕುಗಳಲ್ಲಿ ಬರ ಘೋಷಣೆಗೆ ಸಿದ್ಧತೆ ನಡೆಸಲಾಗಿದೆ ಎಂದರು.

Advertisements

ಉಚಿತ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, “ದೇಶದಲ್ಲಿ ಶೇ. 35 ರಿಂದ 37ರಷ್ಟು ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. ಯುಪಿಎ ಇದ್ದಾಗ ಆಹಾರ ಭದ್ರತಾ ಕಾಯ್ದೆ ತರಲಾಗಿತ್ತು. ಯಾರೂ ಕೂಡ ಕೆಲಸ ಇಲ್ಲದೆ ಮಲಗಬಾರದು ಅಂತ ನರೇಗಾ ಯೋಜನೆ ತಂದಿದ್ದೆವು. ಈ ಆಹಾರ ಭದ್ರತಾ ಕಾಯ್ದೆಯಿಂದ ಜನರಿಗೆ ಅನುಕೂಲ ಆಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X