ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಯೊಬ್ಬರು ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಮಡಿಕೇರಿ ಬಳಿಯ ಕೆದಕಲ್ನಲ್ಲಿ ನಡೆದಿದೆ. ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಮತ್ತೊಂದು ಘಟನೆಯಲ್ಲಿ ಸುಂಟಿಕೊಪ್ಪದ ಬಳಿ ಬೈಕ್ ಸವಾರನ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಬೈಕ್ ಸವಾರನಿಗೆ ಗಾಯಗಳಾಗಿವೆ. ಆತನನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆಸ್ಪತ್ರೆಗೆ ರವಾನಿಸಿದ್ದಾರೆ.
ಬೈಕ್ ಸವಾರನ ಮೇಲೆ ದಾಳಿ ನಡೆಸಿದ್ದ ಆನೆ, ಘಟನೆ ನಡೆದ ಅನತಿ ದೂರದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ದಾಳಿ ನಡೆಸಿದೆ. ಆದರೆ, ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.