‘ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿರುವ, ವಿದ್ಯಾರ್ಥಿಗಳಿಗೆ ನಾನಾ ರೀತಿಯಲ್ಲಿ ನೆರವು ನೀಡುತ್ತಿರುವ ಮನೋಜ್ ಅವರನ್ನು ‘ರಾಜ್ಯಮಟ್ಟದ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಅಂಬಲಪಾಡೊಯಲ್ಲಿ ಸೆಪ್ಟೆಂಬರ್ 5ರಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಒಗ್ಗೂಡಿಆಯೋಜಿಸಿರುವ ‘ಶಿಕ್ಷಕ ಸಾಹಿತಿಗಳ ಸಮ್ಮೇಳನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.
ಮನೋಜ್ ಕಡಬ ಅವರು ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನವನ್ನು ಆರಂಭಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಕಾಯಕದಲ್ಲಿ ನಿರತಗಿದ್ದಾರೆ. ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಹಾಗೂ ಮಕ್ಕಳಿಗೆ ವರ್ಷ ಪೂರ್ತಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡುತ್ತಿದ್ದಾರೆ. ಸರ್ಕಾರಿ ಶಾಸಲೆಗಳ ಮಕ್ಕಳು ಇಂಗ್ಲಿಷ್‌ನಲ್ಲಿ ಮಾತನಾಡುವುದನ್ನು ಕಾಣುವ ನೆರೆಮನೆಯ ಮಕ್ಕಳೂ ಕನ್ನಡ ಮಾಧ್ಯಮ ಶಾಲೆಗಳತ್ತ ಆಕರ್ಷಿತರಾಗುವಂತೆ ಮಾಡುತ್ತಿದ್ದಾರೆ.