- ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಚಟುವಟಿಕೆ ಆರಂಭ
- ಸಂಶೋಧನಾ ವಿದ್ಯಾರ್ಥಿಗಳಿಂದ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿ ಸ್ಥಾಪನೆ
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಮುಂಭಾಗದಲ್ಲಿ ಅದೇ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಸೋಮವಾರ ಡಾ. ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ಮಾಡಿದರು.
ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿ ನಂದಕುಮಾರ ಮಾತನಾಡಿ, ” ಬಾಬಾ ಸಾಹೇಬರು ರಚಿತ ಸಂವಿಧಾನದ ಅಡಿಯಲ್ಲಿ ಸ್ಥಾಪಿತವಾದ ಶಿಕ್ಷಣ ಸಂಸ್ಥೆಯಾಗಿದೆ. ಆದರೆ ಅನೇಕ ದಿನಗಳಿಂದ ವಿಶ್ವವಿದ್ಯಾಲಯದಲ್ಲಿ ಸಂಘ ಪರಿವಾರದ ಚಟುವಟಿಕೆಗಳು ನಡೆಯುತ್ತಿವೆ, ಕೋಮುವಾದಿ ಸಂಘಟನೆಗಳ ಕೇಂದ್ರ ಕಚೇರಿಯಾಗಿ ಕೆಲಸ ಮಾಡುತ್ತಿದ್ದು, ಆರ್ ಎಸ್ ಎಸ್ ಪರೇಡ್ ಮಾಡುವುದು, ರಾಮನವಮಿ ಆಚರಣೆ , ಹನುಮಾನ್ ಚಾಲೀಸಾ ಪಠಣ ನಡೆಯುತ್ತಿದೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಇತ್ತೀಚೆಗೆ ಮಂಗಳೂರಿನಿಂದ ಎಬಿವಿಪಿ ಮುಖಂಡರೊಬ್ಬರನ್ನು ಅನಧಿಕೃತವಾಗಿ ಆಹ್ವಾನಿಸಿ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಿ ನಂತರ ಸರಸ್ವತಿಯ ಕಂಚಿನ ಮೂರ್ತಿ ಗ್ರಂಥಾಲಯದ ಒಳಗಡೆ ಪ್ರತಿಷ್ಠಾಪಿಸಿದರು. ಈ ವಿಶ್ವವಿದ್ಯಾಲಯವನ್ನು ಧಾರ್ಮಿಕ ಕೇಂದ್ರವಾಗಿ ರೂಪಿಸುವ ಎಲ್ಲಾ ಕಾರ್ಯಗಳು ಇಲ್ಲಿ ನಡೆದವು, ಅದನ್ನು ವಿರೋಧಿಸಿ ಪ್ರತಿರೋಧವಾಗಿ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆ ಮಾಡಿದ್ದೇವೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ
ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಇತರೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.