ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ನಡೆಸಿದ್ದು, ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಬಳಿಯ ಆರೆನೂರು ದುರ್ಗದಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಹೋಗಲು ಪ್ರಯತ್ನಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೂ ಆನೆ ದಾಳಿಮಾಡಲು ಪ್ರಯತ್ನಿಸಿದೆ ಎನ್ನಲಾಗಿದೆ. ಅರಣ್ಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಸ್ಥಳದಲ್ಲಿ ಓಡಿಸಿದ್ದು, ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಆಲ್ದೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸುತ್ತಮುತ್ತಲಿದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಆನೆಗಳ ಚಲನ-ವಲನದ ಮೇಲೆ ಅರಣ್ಯ ಸಿಬ್ಬಂದಿಗಳು ನಿಗಾವಹಿಸಿದ್ದಾರೆ. ಆದರೂ, ಕಾರ್ಮಿಕರೊಬ್ಬರು ಆನೆ ದಾಳಿಗೆ ಬಲಿಯಾಗಿದ್ದಾರೆ.
ಎರಡು ದಿನದ ಹಿಂದಷ್ಟೇ ಸಕಲೇಶಪುರ ಆಲೂರು ಸಮೀಪ ಶಾರ್ಪ್ ಶೂಟರ್ ಒಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು.