ಚನ್ನಪಟ್ಟಣ | ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರ ಕಳುಹಿಸಿದ ಸಾಲ ವಸೂಲಾತಿ ಏಜೆಂಟ್; ಪತಿ ಆತ್ಮಹತ್ಯೆ

Date:

Advertisements

ತನ್ನ ಪತ್ನಿಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಕಳಿಸಿದ್ದನ್ನು ಕಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಸಾಲ ವಸೂಲಿ ಏಜೆಂಟ್‌ವೊಬ್ಬ ಮಹಿಳೆಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಆಕೆಯ ಪತಿಗೆ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದಾನೆ. ಇದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣದ ಶೆಟ್ಟಿಹಳ್ಳಿ ನಿವಾಸಿ ಪ್ರಕಾಶ್ (42) ಮೃತ ದುರ್ದೈವಿ. ಇವರು ಚನ್ನಪಟ್ಟಣದ ಮಂಗಳವಾರಪೇಟೆಯಲ್ಲಿರುವ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರಲ್ಲಿ ತಮ್ಮ ಹೆಂಡತಿಯ ಹೆಸರಿನಲ್ಲಿ ಸಾಲ ಪಡೆದಿದ್ದರು. ಸಾಲ ಪಡೆಯುವ ಸಲುವಾಗಿ ಸಂಸ್ಥೆಯ ಸಾಲ ವಸೂಲಾತಿ ಏಜೆಂಟ್ ರಾಜು ಎಂಬುವವರಿಗೆ ತಮ್ಮ ಹೆಂಡತಿಯ ಫೋಟೋ, ಮೊಬೈಲ್ ಸಂಖ್ಯೆ ಸೇರಿದಂತೆ ಮುಂತಾದ ವಿವರಗಳನ್ನು ಹಂಚಿಕೊಂಡಿದ್ದಾರೆ.

Advertisements

ಮಂಡ್ಯದ ಮಳವಳ್ಳಿಯ ಸಾಲ ವಸೂಲಾತಿ ಏಜೆಂಟ್ ಆಗಿರುವ ಆರೋಪಿ ಕೆಂಪರಾಜು ಸಾಲ ಮರುಪಾವತಿ ವಿಚಾರವಾಗಿ ಮಹಿಳೆಗೆ ಕರೆ ಮಾಡಿ ಸ್ನೇಹ ಬೆಳೆಸಲು ಪ್ರಯತ್ನ ಪಡುತ್ತಿದ್ದನು. ಇದೇ ವೇಳೆ, ಕರೆ ಮಾಡಿ ನಗ್ನ ಛಾಯಾಚಿತ್ರಗಳನ್ನು ಕಳುಹಿಸುವಂತೆ ಕೇಳಿಕೊಂಡಿದ್ದಾನೆ ಎಂದು ಮೃತನ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಮಹಿಳೆ ನಿರಾಕರಿಸಿದ ಕಾರಣ ಆಕೆಯ ಫೋಟೋಗಳನ್ನು ಅಶ್ಲೀಲ ಫೋಟೋಗಳಾಗಿ ಸೃಷ್ಟಿಸಿ ಪತಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಮಹಿಳೆ ಇದಕ್ಕೂ ಮಣಿಯದೇ ಇದ್ದಾಗ ಆಕೆಯ ನಕಲಿ ಅಶ್ಲೀಲ ಚಿತ್ರಗಳನ್ನು ಸೃಷ್ಟಿಸಿ ಹಣ ಮತ್ತು ಚಿನ್ನಾಭರಣಕ್ಕೆ ಬೇಡಿಕೆ ಇಡುತ್ತಿದ್ದನು. ಅಲ್ಲದೇ ಅದನ್ನು ಕುಟುಂಬದವರು ಹಾಗೂ ಸಂಬಂಧಿಕರೊಂದಿಗೆ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದನು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಬ್ಬೆದ್ದು ನಾರುತ್ತಿರುವ ಪಾರಂಪರಿಕ ರಸೆಲ್ ಮಾರುಕಟ್ಟೆ: ಕ್ರಮ ಕೈಗೊಳ್ಳದ ಬಿಬಿಎಂಪಿ

“ಆಗಸ್ಟ್ 30 ರಂದು ಕೆಂಪರಾಜು ತನ್ನ ಅಶ್ಲೀಲ ಫೋಟೋಗಳನ್ನು ಮಾರ್ಫ್ ಮಾಡಿ ಪತಿಗೆ ಕಳುಹಿಸಿದ್ದನು. ಇದರಿಂದ ಮನನೊಂದ ಪ್ರಕಾಶ್ ಶನಿವಾರ ನಸುಕಿನಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಕೆಂಪರಾಜು ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಐಟಿ ಕಾಯ್ದೆ ಸೇರಿದಂತೆ ಇತರೆ ಆರೋಪಗಳನ್ನು ದಾಖಲಿಸಲಾಗಿದೆ. ಆತನನ್ನು ಸೆರೆ ಹಿಡಿಯುವ ಪ್ರಯತ್ನ ಮುಂದುವರಿದಿದೆ” ಎಂದು ಚನ್ನಪಟ್ಟಣ ಟೌನ್ ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X