ಮೈಸೂರು | ಬರ ನಿರ್ವಹಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ; ರೈತ ಸಂಘ ಆಗ್ರಹ

Date:

Advertisements

ರಾಜ್ಯ ಬರಗಾಲಕ್ಕೆ ತುತ್ತಾಗಿದ್ದು, ಈಗಾಗಲೇ ಸರ್ಕಾರ 130 ತಾಲೂಕುಗಳನ್ನು ಬರ ಪ್ರದೇಶವೆಂದು ಘೋಷಿಸಲು ಆಲೋಚನೆ ಮಾಡಿದೆ. ಕೇಂದ್ರ ಸರ್ಕಾರ ರಾಜ್ಯದ ಬರಗಾಲವನ್ನು ಸಮರೋಪಾದಿಯಲ್ಲಿ ಎದುರಿಸಲು ತುರ್ತಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ರಾಜ್ಯದ ರೈತರನ್ನು ರಕ್ಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ್ದು, ಮೈಸೂರು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಎನ್‌ಡಿಆರ್‌ಎಫ್‌ ನೀತಿಯು ಓಬಿರಾಯನ ಕಾಲದ್ದಾಗಿದ್ದು, ಅದನ್ನು ಕೂಡಲೇ ಮಾರ್ಪಾಡು ಮಾಡಿ ವೈಜ್ಞಾನಿಕವಾಗಿ ರೂಪಿಸಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ಅಂತರ್ಜಲ ವೃದ್ಧಿಸಲು ನೆರವು ನೀಡಬೇಕು. ರೈತರ ಸಾಲವನ್ನು ಮನ್ನಾ ಮಾಡಲು ಸಹಕರಿಸಬೇಕು ಎಂದು ಒತ್ತಾಯಿಸಿದರು.

Advertisements

“ಕಾವೇರಿ ಜಲ ವಿವಾದದ ತೀರ್ಪಿನಲ್ಲಿ ನ್ಯಾಯ ಮಂಡಳಿಯಾಗಲಿ ಅಥವಾ ಸರ್ವೋಚ್ಚ ನ್ಯಾಯಾಲಯವಾಗಲಿ ಸಂಕಷ್ಟ ಸೂತ್ರಕ್ಕೆ ಸ್ಪಷ್ಟವಾದ ಮಾನದಂಡವನ್ನು ರೂಪಿಸಿರುವುದಿಲ್ಲ. ಈ ಕಾರಣದಿಂದಾಗಿ ಮಳೆ ಕೊರತೆ ಸಂದರ್ಭದಲ್ಲಿ ವಿವಾದವು ಬಿಗಡಾಯಿಸಿ ಅವಲಂಬಿತರು ಅತ್ಯಂತ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಈ ಸಂಬಂಧ ಸೂಕ್ತ ಸಂಕಷ್ಟ ಸೂತ್ರವನ್ನು ರೂಪಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

“ಕಬ್ಬು ಬೆಲೆ ನಿಗದಿ ಮಾಡಲು ಕೇಂದ್ರ ಸರ್ಕಾರ ಶೇ.10.25ರಷ್ಟು ಇಳುವರಿಯನ್ನು ಆಧಾರವಾಗಿ ಇಟ್ಟುಕೊಂಡಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಇದನ್ನು ಮಾರ್ಪಾಡು ಮಾಡಿ ಶೇ.8.5ರಷ್ಟು ಇಳುವರಿ ಮಾನದಂಡವನ್ನು ಅನುಸರಿಸಬೇಕು. ಉತ್ಪನ್ನ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದು, ಬೆಲೆ ನಿಗದಿಯಲ್ಲಿ ರೈತರನ್ನು ರಕ್ಷಿಸುವ ನೀತಿಯನ್ನು ಅನುಸರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಕಲ್ಯಾಣ, ಹುಲಸೂರ ಬರಪೀಡಿತ ತಾಲೂಕು ಘೋಷಣೆಗೆ ರೈತ ಸಂಘ ಆಗ್ರಹ

“ಸ್ಥಳೀಯವಾಗಿ ಕೋಚನಹಳ್ಳಿ ಸಮಸ್ಯೆ ಪರಿಹಾರಕ್ಕಾಗಿ 800ಕ್ಕೂ ಹೆಚ್ಚು ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ವಸತಿ ಸೌಕರ್ಯ ಕಲ್ಪಿಸಿ ಕೊಡುವ ಭರವಸೆಯನ್ನು ತಾವು ನೀಡಿದ್ದೀರಿ. ಅವರ ವಸತಿಗಾಗಿ ಜಮೀನನ್ನು ಒದಗಿಸಿಕೊಡಬೇಕು. ಹಾಗೂ ಸೂಕ್ತ ಪರಿಹಾರಗಳು ಅವರಿಗೆ ಇನ್ನೂ ತಲುಪಿಲ್ಲ. ಈ ಸಮಸ್ಯೆಗಳಿಗೆ ಒಂದು ತಾರ್ಕಿಕ ಅಂತ್ಯವನ್ನು ಮುಖ್ಯಮಂತ್ರಿಯವರು ನೀಡಬೇಕು” ಎಂದು ಒತ್ತಾಯಿಸಿದರು.

“ಕಾವೇರಿ ಮತ್ತು ಕಬಿನಿ ನೀರನ್ನು ವ್ಯವಸಾಯಕ್ಕೆ 15 ದಿನ ನೀರು ಬಿಟ್ಟು 10 ದಿನ ನೀರು ನಿಲ್ಲಿಸುವ ವ್ಯವಸ್ಥೆಯ ಮಾದರಿಯಲ್ಲೇ ಸರ್ಕಾರ ಹಾಗೂ ನೀರಾವರಿ ಇಲಾಖೆ ರೈತರ ವ್ಯವಸಾಯಕ್ಕೆ ನೀರು ಹರಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಸೇರಿದಂತೆ ಬಹುತೇಕ ರೈತ ಮುಖಂಡುರು ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X