ಪದವಿ ಪಡೆದವರೇ ಜಾತಿವಾದಿಗಳಾದರೆ ಯಾವ ಚಂದಕ್ಕೆ ಶಿಕ್ಷಣ ಪಡೆಯಬೇಕು?: ಸಿಎಂ ಅಸಮಾಧಾನ

Date:

Advertisements
  • ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು
  • ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ:ಸಿಎಂ

ವಿದ್ಯೆ ಕಲಿಸುವುದಷ್ಟೇ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

“ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು. ಇವರು ಸಮಾಜದ, ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳು. ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಢ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ. ಡಿಗ್ರಿ ಪಡೆದವರೇ ಹೆಚ್ಚೆಚ್ಚು ಜಾತಿವಾದಿಗಳಾದರೆ ಈ ಚಂದಕ್ಕೆ ಶಿಕ್ಷಣ ಏಕೆ ಪಡೆಯಬೇಕು” ಎಂದು ಪ್ರಶ್ನಿಸಿದರು.

Advertisements

“ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಒದಗಿಸಿತು. ಈಗ ಈ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇ. 100 ಸಾಕ್ಷರತೆ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿಯಾಗುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಬೇಕಾದರೆ ಎಲ್ಲರಿಗೂ ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆತು ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಬೇಕು” ಎಂದರು.

“ಶಿಕ್ಷಕ ವೃತ್ತಿಗೆ ಬರುವಾಗ ಎಲ್ಲ ಶಿಕ್ಷಕರಿಗೂ ಒಂದೇ ರೀತಿಯ ತರಬೇತಿ ಇರುತ್ತದೆ. ಆದರೆ ಬೇರೆ ಬೇರೆ ಜಿಲ್ಲೆಗಳ ಫಲಿತಾಂಶದ ಪ್ರಮಾಣ, ಶೈಕ್ಷಣಿಕ ಗುಣಮಟ್ಟ ಭಿನ್ನವಾಗಿರುವುದು ಏಕೆ ಎನ್ನುವುದನ್ನು ಪ್ರತಿಯೊಬ್ಬ ಶಿಕ್ಷಕರೂ ತಮ್ಮನ್ನು ತಾವು ಕೇಳಿಕೊಂಡು ದಿನದಿಂದ ದಿನಕ್ಕೆ ಉನ್ನತೀಕರಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

“ಈ ಹಿಂದೆ ನಮ್ಮ ಸರ್ಕಾರ ಬಂದ ಬಳಿಕ 10 ಸಾವಿರ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿದ್ದೂ ಸೇರಿ ಹಲವು ಕಾರ್ಯಕ್ರಮ ಮಾಡಿದೆವು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆರಂಭಿಸಿದೆವು. ನಂತರ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ನಾವು ಅಧಿಕಾರಕ್ಕೆ ಬಂದು ಲ್ಯಾಪ್ ಟಾಪ್ ಕೊಡುವುದನ್ನು ಮುಂದುವರೆಸಿದ್ದೇವೆ” ಎಂದರು.

“ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳಿಗೆ ಶೇ 80 ರಷ್ಟು ಮಕ್ಕಳು ತಳಸಮುದಾಯದಿಂದ ಬರುತ್ತಾರೆ. ಅವರ ಓದಿಗೆ ಅನುಕೂಲ ಆಗಲಿ ಎನ್ನುವ ಕಾರಣದಿಂದ ಕ್ಷೀರಭಾಗ್ಯ ಯೋಜನೆ ಜಾರಿ ಮಾಡಿದೆವು. ವಾರಕ್ಕೆರಡು ಮೊಟ್ಟೆ ಕೊಡುವುದನ್ನು sslc ವರೆಗೂ ಮುಂದುವರೆಸಿದೆವು. ಶೂ ಭಾಗ್ಯ ಕಲ್ಪಿಸಿದೆವು” ಎಂದು ಮುಖ್ಯಮಂತ್ರಿ ತಿಳಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X