ಧಾರವಾಡ | ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಸೇವೆ ಅವಶ್ಯಕ: ಸಚಿವ ಸಂತೋಷ್ ಲಾಡ್

Date:

Advertisements

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ವ್ಯಕ್ತಿತ್ವವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಮಂಗಳವಾರ ಧಾರವಾಡದ ಜೆಎಸ್‌ಎಸ್‌ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರತಿಯೊಬ್ಬ ಯಶಸ್ವಿ ಸಾಧಕನ ಹಿಂದೆ ಒಬ್ಬ ಶಿಕ್ಷಕರು ಇರುತ್ತಾರೆ. ಸಮಾಜವನ್ನು ಬದಲಾವಣೆ ಮಾಡಬೇಕಾದರೆ ಶಿಕ್ಷಕರ ಪಾತ್ರ ಬಹು ಮುಖ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳು ಚಿಂತನೆಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳೋಣ. ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದರೆ ಸಂವಿಧಾನ ಅತ್ಯವಶ್ಯಕವಾಗಿದೆ ಅದನ್ನು ಅರಿತು ನಾವೆಲ್ಲರೂ ಇಂದು ನಡೆಯಬೇಕಾಗಿದೆ” ಎಂದು ಅವರು ಹೇಳಿದರು.

“ಸಮಾಜದಲ್ಲಿನ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಲು ಮಕ್ಕಳಿಗೆ ತಿಳುವಳಿಕೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡಬೇಕು. ಶಿಕ್ಷಕ ವೃತ್ತಿಗೆ ಸೇರಿ, ಸೇವೆ ಸಲ್ಲಿಸುತ್ತಿರುವ ನೀವು ಸುದೈವಿಗಳು, ಆದ್ದರಿಂದ ಎಲ್ಲ ಶಿಕ್ಷಕರು ಗುಣಮಟ್ಟದ ಮತ್ತು ನೈತಿಕ ಶಿಕ್ಷಣಕ್ಕೆ ಮತ್ತು ನೂತನ ಕೌಶಲ್ಯಗಳಿಗೆ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಕಲಿಸಬೇಕು” ಎಂದರು.

Advertisements

ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಮುರಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಫ್ ಚುಳಕಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಯಟ್ ನಿವೃತ್ತ ಪ್ರಾಚಾರ್ಯ ಎನ್.ಕೆ. ಸಾಹುಕಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಎಸ್.ಎಂ. ಹುಡೆದಮನಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಫ್.ವಿ.ಮಂಜಣ್ಣನವರ, ಪ್ರೌಢ ಶಾಲೆ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಜಿ.ಬಶೆಟ್ಟಿ ಹಾಗೂ ಇಲಾಖೆಯ ವಿಷಯ ಪರಿವೀಕ್ಷಕರು, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ...

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ...

ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ...

Download Eedina App Android / iOS

X