ಚಿತ್ರದುರ್ಗ | ಶುದ್ದ ನೀರಿನ ಘಟಕ ಕಾಮಗಾರಿಗೆ ಭೂಮಿ ಪೂಜೆ

Date:

Advertisements

‌ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯ ನೀರಿನ ಸಂಪರ್ಕವನ್ನು ಹೊಸದಾಗಿ ನಿರ್ಮಿಸುವ ಯೋಜನೆಗೆ ಸರ್ಕಾರ ನಿರ್ಧರಿಸಿದ್ದು, ಸಂಪೂರ್ಣವಾಗಿ ಹೊಸದಾದ ಸಂಗ್ರಹ ಟ್ಯಾಂಕ್, ನೀರಿನ ಸಂಪರ್ಕ ಶುದ್ಧ ಕುಡಿಯುವ ನೀರಿನ ಘಟಕ ನೀಡಿ ನಿರ್ವಹಣೆ ಮಾಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ನಗರದ ಕವಾಡಿಗರ ಹಟ್ಟಿಯಲ್ಲಿ ಮಂಗಳವಾರ ನಗರಸಭೆ ಮತ್ತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಪೈಪ್‌ಲೈನ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

“ನಗರಸಭೆಯ ₹3.07 ಕೋಟಿ ಅನುದಾನದಲ್ಲಿ, ಇಡೀ ಕವಾಡಿಗರಹಟ್ಟಿಗೆ ಹೊಸದಾಗಿ ಪೈಪ್‌ಲೈನ್ ಅಳವಡಿಕೆ, ಮನೆ ಮನೆಗೆ ಹೊಸ ನಳದ ಸಂಪರ್ಕ, 2.5 ಲಕ್ಷ ಲೀಟರ್ ಸಾಮರ್ಥ್ಯವಿರುವ ಓವರ್ ಹೆಡ್ ಟ್ಯಾಂಕ್ ಹಾಗೂ ಹಿರೇಕಂದವಾಡಿ ನೀರು ಶುದ್ದೀಕರಣ ಘಟಕದ ರಿಪೇರಿ ಕಾಮಗಾರಿಗಳನ್ನು ಮಾಡಲಾಗುವುದು” ಎಂದರು.

Advertisements

“ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ₹16.50 ಲಕ್ಷ ಅನುದಾನದಲ್ಲಿ, ಕವಾಡಿಗರಹಟ್ಟಿಯಲ್ಲಿ ಹೊಸ ಬೋರವೆಲ್ ಕೊರೆಯುವುದರೊಂದಿಗೆ, 1000 ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಹಾಗೂ 5 ವರ್ಷ ಘಟಕದ ನಿರ್ವಹಣೆಯನ್ನು ಇಲಾಖೆಯೇ ಮಾಡಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭೂ ಹಗರಣ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಇದೇ ಸಂದರ್ಭದಲ್ಲಿ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಅವರು ಕಳೆದ 31 ದಿನಗಳಿಂದ ನಿರಂತರವಾಗಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದಿಸಿ ಮಾಹಿತಿ ಪಡೆದಕೊಂಡರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೆ ಸಿ ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ...

Download Eedina App Android / iOS

X