ಸನಾತನ ಧರ್ಮ ವಿವಾದ | ಉದಯನಿಧಿ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲು

Date:

Advertisements

ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರ ಮೇಲೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆಯ ಮಾಜಿ ಮೇಯರ್ ಬಿ ಜಿ ಅಜಯ್ ಕುಮಾರ್‌ ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತಮಿಳುನಾಡಿನ ಮುಖ್ಯಮಂತ್ರಿ ಪುತ್ರ, ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಡಿಎಂಕೆ ಪಕ್ಷದ ಯುವ ಘಟಕದ ಅಧ್ಯಕ್ಷ ಉದಯನಿಧಿ ಸ್ಟಾಲಿನ್ ಅವರು ಓಲೈಕೆ ಮತ್ತು ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಈ ರೀತಿಯ ಹೇಳಿಕೆಯನ್ನು ನೀಡಿದ್ದು, ನಮ್ಮ ಸನಾತನ ಧರ್ಮವನ್ನು ಡೆಂಗ್ಯೂ, ಕೊರೊನಾ ಮಲೇರಿಯಾಕ್ಕೆ ಸಮಾನವಾದದ್ದೆಂದು ನೀಡಿರುವ ಹೇಳಿಕೆ ಖಂಡನೀಯ” ಎಂದರು.

“ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಬಾರದು. ಈ ಹಿಂದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲಷ್ಕರ್ ಎ ತೊಯ್ದಾ ಉಗ್ರವಾದಿ ಸಂಘನೆಗಿಂತ ಹಿಂದುತ್ವದ ಸಂಘಟನೆಗಳು ಅಪಾಯಕಾರಿ ಎಂದು 2010ರಲ್ಲಿ ಹೇಳಿದ್ದರು. ಕಾಂಗ್ರೆಸ್, ಡಿಎಂಕೆ ಹಾಗೂ ಐಎನ್‌ಡಿಐಎ ಮೈತ್ರಿಕೂಟ ಸನಾತನ ಧರ್ಮವಾದ ನಮ್ಮ ಹಿಂದುತ್ವದ ನಿರ್ಮೂಲನೆ ಬಗ್ಗೆ ಮಾತನಾಡುತ್ತಾ ದೇಷಿಸುತ್ತಿದೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

ಸನಾತನ ಧರ್ಮದ ವಿರುದ್ಧ ದ್ವೇಷಭಾಷಣ ಮಾಡಿರುವ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸೂಕ್ತ ತನಿಖೆ ನೆಡೆಸಿ ಕ್ರಮ ಕೈಗೊಳ್ಳಬೇಕು. ದ್ವೇಷದ ಭಾಷಣ ಮಾಡಿರುವ ಉದಯನಿಧಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಕೇಶ್ ಭಜರಂಗಿ, ಗುರುಪ್ರಸಾದ್ ಕೈದಾಳೆ, ರವಿಕಿರಣ್, ಚನ್ನಬಸವನಗೌಡ್ರು, ರಾಜುನೀಲಗುಂದ, ಕೊಟ್ರೇಶ್ ಗೌಡ್ರು, ಪ್ರದೀಪ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ...

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X