ಬಡವರಿಗೆ ನೀಡಿದ್ರೆ ರಾಜ್ಯ ದಿವಾಳಿ; ಅಂಬಾನಿ, ಅದಾನಿಗೆ ಕೊಟ್ರೆ ಅಭಿವೃದ್ಧಿನಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

Advertisements
  • ‘ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸರ್ಕಾರದಿಂದ ಪರಿಶೀಲನೆ’
  • ‘ನಮ್ಮ ಸರ್ಕಾರದ ಕ್ಷೀರ ಭಾಗ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ವುಗೆ ಗಳಿಸಿದೆ’

ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮಕ್ಕಳು‌ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ” ಎಂದರು.

Advertisements

ಮೋದಿಯಿಂದ ಸುಳ್ಳು

“ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ‌ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು” ಎಂದು ಟೀಕಿಸಿದರು.

ಕ್ಷೀರ ಭಾಗ್ಯ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೌರಿ ಲಂಕೇಶ್ ಹಂತಕರಿಗೆ ಶೀಘ್ರವೇ ದೊರೆಯಲಿ ಶಿಕ್ಷೆಯ ಮೋಕ್ಷ!

“ಅಂಬಾನಿ, ಅದಾನಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ, ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ವಿರೋಧಿಸಬೇಡಿ” ಎಂದರು.

“ಕೆ.ಎನ್.ರಾಜಣ್ಣ ಅವರನ್ನು ರಾಜಕೀಯವಾಗಿ ಕಳೆದುಕೊಂಡರೆ ಅದು ಮಧುಗಿರಿಯ ಜನತೆಗೆ ಬಹಳ ದೊಡ್ಡ ಲಾಸ್ ಆಗುತ್ತದೆ. ರಾಜಣ್ಣ ಬಡವರ ಪರವಾಗಿ ಸಿಕ್ಕಾಪಟ್ಟೆ ಕೆಲಸ ಮಾಡಿದ್ದಾರೆ. ಮಧುಗಿರಿಯನ್ನು ಜಿಲ್ಲೆ ಮಾಡುವ ಕೆ.ಎನ್.ರಾಜಣ್ಣ ಅವರ ಬೇಡಿಕೆಯನ್ನು ನಾನು ಖಂಡಿತ ಪರಿಶೀಲಿಸುತ್ತೇನೆ. ಮಧುಗಿರಿಯಲ್ಲಿರುವ ಏಷ್ಯಾ ಖಂಡದಲ್ಲೇ ಪ್ರಸಿದ್ದವಾಗಿರುವ ಏಕಶಿಲೆ ಬೆಟ್ಟಕ್ಕೆ ರೋಪ್ ವೆ ಹಾಕಿಸುತ್ತೇವೆ” ಎಂದು ಭರವಸೆ ನೀಡಿದರು.

“ಎತ್ತಿನಹೊಳೆ ಯೋಜನೆಗೆ ಸಮರ್ಪಕವಾಗಿ ಹಣ ಕೊಡದೆ ಬಿಜೆಪಿ ಜಿಲ್ಲೆಯ ಜನತೆಗೆ ವಂಚಿಸಿತು. ತುಂಗಾ ಮೇಲ್ದಂಡೆ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ನೆರವು ನೀಡಲಿಲ್ಲ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಎನ್ನುವ ನಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುತ್ತಿಲ್ಲ” ಎಂದು ಹೇಳಿದರು.

ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್, ಶಾಸಕರಾದ ರಂಗನಾಥ್, ಷಡಾಕ್ಷರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X