ಇಂಡಿಯಾ ಒಕ್ಕೂಟದ ಹಿಡನ್ ಅಜೆಂಡಾ ಉದಯನಿಧಿ ಸ್ಟಾಲಿನ್ ಹೇಳಿಕೆ ಮೂಲಕ ಬಯಲು: ಬೊಮ್ಮಾಯಿ ಕಿಡಿ

Date:

Advertisements
  • ಸನಾತನ ಧರ್ಮವನ್ನು ರೋಗಕ್ಕೆ ಹೋಲಿಕೆ ಮಾಡುವುದೇ ರೋಗ: ಬೊಮ್ಮಾಯಿ
  • ‘ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ ಕಾಂಗ್ರೆಸ್‌ ರೈತ ವಿರೋಧಿ ಮನಸ್ಥಿತಿ’

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಅತ್ಯಂತ ಕೆಟ್ಟ ರೀತಿಯಲ್ಲಿ ನೀಡಿದ್ದಾರೆ. ಧರ್ಮವನ್ನು ರೋಗಕ್ಕೆ ಹೋಲಿಕೆ ಮಾಡುವುದೇ ಒಂದು ರೋಗ, ಇಂಡಿಯಾ ಒಕ್ಕೂಟದ ಕೆಲವರಿಗೆ ಸ್ಟಾಲಿನ್ ಹೇಳಿಕೆ ಅಪಥ್ಯವಾಗಿದೆ. ಆದರೆ, ಇದು ಇಂಡಿಯಾ ಒಕ್ಕೂಟಕದ ಹಿಡನ್ ಅಜೆಂಡಾ ಆಗಿದೆ ಎಂಬುದು ಸ್ಟಾಲಿನ್‌ ಮಾತಿನಿಂದ ಬಯಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸನಾತನ ಧರ್ಮ ಎಲ್ಲಿ ಯಾವಾಗ ಹುಟ್ಟಿತು ಅನ್ನವುದೇ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ನೀಡಿರುವ ಹೇಳಿಕೆಯನ್ನು ಖಂಡಿಸುವೆ. ಪರಮೇಶ್ವರ ಅವರು ದಯವಿಟ್ಟು ವೇದ ಉಪನಿಷತ್ತು ಓದಿಲ್ಲ, ಓದಿ ತಿಳಿದುಕೊಳ್ಳುವ ಪ್ರಯತ್ನ ಮಾಡಲಿ. ಇದೊಂದು ತುಷ್ಟೀಕರಣದ ರಾಜಕಾರಣವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ” ಎಂದು ಕಿಡಿಕಾರಿದರು.

ಭಾರತ್ ನಾಮಕರಣಕ್ಕೆ ಏಕೆ ವಿರೋಧ?‌

Advertisements

“ರಿಪಬ್ಲಿಕ್ ಆಫ್ ಇಂಡಿಯಾ ಹೆಸರನ್ನು ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುತ್ತಿರುವುದಕ್ಕೆ ಪ್ರತಿಪಕ್ಷಗಳು ಏಕೆ ವಿರೋಧ ವ್ಯಕ್ತಪಡಿಸುತ್ತಿವೆ ಅನ್ನುವುದು ಅರ್ಥವಾಗುತ್ತಿಲ್ಲ. ಹಿಮಾಲಯ ಪರ್ವತದಿಂದ ಹಿಡಿದು ಅರಬ್ಬಿ ಸಮುದ್ರದವರೆಗಿನ ಪ್ರದೇಶವನ್ನು ಭಾರತ ಅಂತಲೇ ಕರೆಯಲಾಗುತ್ತದೆ. ಬ್ರಿಟೀಷರು ತಮ್ಮ ಅನುಕೂಲಕ್ಕೆ ತಕ್ಕಂತೆ ಭಾರತ ಸೇರಿದಂತೆ ಅನೇಕ ನಗರಗಳ ಹೆಸರುಗಳನ್ನು ಬದಲಾಯಿಸಿದ್ದರು. ಚೆನೈ, ಕೋಲ್ಕತ್ತಾ, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ನಗರಗಳ ಹೆಸರುಗಳನ್ನು ತಮ್ಮ ಉಚ್ಚಾರಣೆಗೆ ತಕ್ಕಂತೆ ಬದಲಾಯಿಸಿಕೊಂಡಿದ್ದರು. ಅವುಗಳನ್ನು ಈಗ ಮೂಲ ಹೆಸರುಗಳಾಗಿ ಬದಲಾಯಿಸಿಕೊಳ್ಳಲಾಗಿದೆ. ಅದೇ ರೀತಿ ಇಂಡಿಯಾವನ್ನು ಭಾರತ್ ಎಂದು ಬದಲಾಯಿಸುವುದರಲ್ಲಿ ತಪ್ಪೇನಿಲ್ಲ” ಎಂದು ಅಭಿಪ್ರಾಯ ಪಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲದಲ್ಲೂ ಸರ್ಕಾರ ಸಚಿವರಿಗಾಗಿ ಐಷಾರಾಮಿ ಕಾರು ಕೊಳ್ಳುವ ಅಗತ್ಯವಿತ್ತೇ?

“ರೈತರ ಆತ್ಮಹತ್ಯೆ ಕುರಿತು ಕಾಂಗ್ರೆಸ್ ಸಚಿವರ‌ ಹೇಳಿಕೆಗಳು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಖಂಡನೀಯ.‌ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಹೆಚ್ಚಿಗೆ ಮಾಡಿದ್ದರಿಂದ ರೈತರು ಹೆಚ್ಚಿನ ಪ್ರಮಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ‌ ಪಾಟೀಲ್ ಹೇಳಿಕೆ ನೀಡಿರುವುದು ಖಂಡನೀಯ” ಎಂದರು.

“ಈ ಸರ್ಕಾರ ಬಂದ ಮೇಲೆ ರೈತ ವಿರೋಧಿ ನೀತಿ ಅನುಸರಿಸುತ್ತ ಬಂದಿದ್ದಾರೆ. ಜೂನ್, ಜುಲೈ ತಿಂಗಳಲ್ಲಿ ಮಳೆ ಆಗಿಲ್ಲ. ಬರಗಾಲ ಘೋಷಣೆ ಮಾಡಲು ಮೀನ ಮೇಷ ಎಣಿಸುತ್ತಿದ್ದಾರೆ. ಬರಗಾಲ ಘೋಷಣೆ ಆದರೆ, ಹೊಸ ಸಾಲ ಕೊಡಬೇಕು, ಬೆಳೆ ಪರಿಹಾರ ನೀಡಬೇಕು. ರೈತ ದುಡ್ಡಿಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಅನ್ನುವುದು ಅಮಾನವೀಯ. ಯಾರೂ ಕೂಡ ದುಡ್ಡಿಗಾಗಿ ತಮ್ಮ ಜೀವ ತ್ಯಾಗ ಮಾಡುವುದಿಲ್ಲ. ಇದು ಅವರ ರೈತ ವಿರೋಧಿ ಮನಸ್ಥಿತಿ” ಎಂದು ಹರಿಹಾಯ್ದರು.

ದೀರ್ಘಾವಧಿ ಸಾಲಕ್ಕೆ ಪರಿವರ್ತಿಸಬೇಕು

“ಮುಂಗಾರು ಮುಗಿಯುತ್ತ ಬಂದಿದೆ. ರೈತರು ಎರಡು ಮೂರು ಬಾರಿ ಬಿತ್ತನೆ ಮಾಡಿದರೂ ಯಾವುದೇ ಬೆಳೆ ಬಂದಿಲ್ಲ. ರೈತರು ಮಾಡಿಕೊಂಡ ಸಾಲ ತೀರಿಸಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾನೆ. ಸಹಕಾರ ಸಂಘಗಳ ಮೂಲಕ ರೈತರಿಗೆ ಸುಮಾರು 25 ಸಾವಿರ ಕೋಟಿ ರೂ. ಸಾಲ ನೀಡುವ ಗುರಿ ಇಟ್ಟುಕೊಂಡಿದ್ದಾರೆ. ಆದರೆ, ಇದುವರೆಗೂ ಕೇವಲ 7 ಸಾವಿರ ಕೋಟಿ ರೂ. ಮಾತ್ರ ಸಾಲ ನೀಡಿದ್ದಾರೆ. ರೈತರಿಗೆ ಹೆಚ್ಷಿನ ಪ್ರಮಾಣದಲ್ಲಿ ಸಾಲ ನೀಡಬೇಕು. ರೈತರಿಗೆ ನೀಡಿರುವ ಅಲ್ಪಾವಧಿ ಹಾಗೂ ಮಧ್ಯಮಾವಧಿ ಬೆಳೆ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಪರಿವರ್ತನೆ ಮಾಡಬೇಕು. ಕೃಷಿ ಇಲಾಖೆ ಸಕ್ರಿಯವಾಗಿ ರೈತರಿಗೆ ಕೌನ್ಸೆಲಿಂಗ್ ಮಾಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X