ಇಂದಿರಾ ಕ್ಯಾಂಟಿನ್ ಪುನರಾರಂಭ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಜೈನ್ ಅವರಿಗೆ ಮನವಿ ಸಲ್ಲಿಸಿದರು.
“ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳನ್ನು ಒಳಗೊಂಡಂತೆ ನಗರದ ಹಳೆ ಇಂದಿರಾ ಕ್ಯಾಂಟಿನ್ ಸ್ಥಗಿತವಾಗಿದ್ದು, ಪುನರಾರಂಭವಾಗಬೇಕು. ಶಹಾಪುರ, ಸುರಪುರ, ವಡಗೇರಾ, ಗುರುಮಿಠಕಲ್ ಹುಣಸಿನಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭ ಮಾಡಿದರೆ ಸಾರ್ವಜನಿಕರಿಗೆ, ರೈತರಿಗೆ, ಕಾರ್ಮಿಕರಿಗೆ, ಬಡವರಿಗೆ ಕಡಿಮೆ ದರದಲ್ಲಿ ಉಪಹಾರ ದೊರೆಯುವುದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕಾಂಪೌಂಡ್ ಕುಸಿದು 3 ಕಾರು ಜಖಂ; ಸೂಕ್ತ ಪರಿಹಾರಕ್ಕೆ ಆಗ್ರಹ
ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟಿನ್ ಪುನಃ ತೆರೆದು, ಉಪಹಾರದ ವ್ಯವಸ್ಥೆ ಕಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.
ಇದೇ ವೇಳೆ ಸಂಘಟನೆ ಸಮಿತಿ ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಶರಣರೆಡ್ಡಿ ಹತ್ತಿಗೂಡುರ್, ಅಂಬರೀಶ್ ದೋರನಹಳ್ಳಿ, ಬಸಲಿಂಗ ಶಿರವಾಳ, ಶೇಖಪ್ಪ ದೊಡ್ಮನಿ, ಶರಣು ಇದ್ದರು.