ಜನರಿಂದ ಹಣ ಪಡೆದುಕೊಂಡಿದ್ದರೂ ಹಕ್ಕುಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಪ್ರತಿಭಟನೆ ನಡೆಸಿದ್ದಾರೆ.
“ನಿಡುವಾಳೆ ಗ್ರಾಮ ಪಂಚಾಯಿತಿಯ ಸುತ್ತಮುತ್ತಲಿನ ಊರಿನ ನಿವೇಶನ ರಹಿತರಿಗೆ ಹಕ್ಕುಪತ್ರ ನೀಡಲು ತಹಶೀಲ್ದಾರ್ ಸತಾಯಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಳೆದ 2 ವರ್ಷದಿಂದ ತಾಲೂಕಿನ ಮರ್ಕಲ್, ನಿಡುವಾಳೆ ಗ್ರಾಮದ ಸುಮಾರು 70ಕ್ಕೂ ಅಧಿಕ ಮಂದಿ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ ನಿತ್ಯವೂ ಹಕ್ಕುಪತ್ರಕ್ಕಾಗಿ ಕಚೇರಿಗೆ ಅಲೆಯುತ್ತಿದ್ದಾರೆ. ಅರ್ಜಿ ಸಲ್ಲಿಸಿದವರ ಪೈಕಿ 30ಕ್ಕೂ ಅಧಿಕ ಮಂದಿ ಸರ್ಕಾರಕ್ಕೆ ಹಣವನ್ನೂ ಪಾವತಿ ಮಾಡಿದ್ದಾರೆ. ಆದರೆ ತಹಶೀಲ್ದಾರ್ ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಸ್ಲಂ ನಿವಾಸಿಗಳ ಭೂಮಿ ವಶಪಡಿಸಿಕೊಳ್ಳಲು ವರ್ಕ್ಫ್‌ಬೋರ್ಡ್ ಯತ್ನ; ಪ್ರತಿಭಟನೆ
“ಇದೇ ಕಾರಣದಿಂದ ನಾನೇ ಖುದ್ದಾಗಿ ತಾಲೂಕು ಕಚೇರಿಗೆ ತೆರಳಿ ವಿಚಾರಿಸಿದಾಗ ʼನಾಳೆ ಬನ್ನಿʼ ಎಂಬ ಹಾರಿಕೆಯ ಉತ್ತರ ನೀಡುತ್ತಾರೆ. ಹಾಗಾಗಿ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.