ಭಾರತ ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿಎಂ ಸಿದ್ದರಾಮಯ್ಯ ಅಭಿಮತ

Date:

Advertisements
  • ಭಾರತ್ ಜೋಡೊ ಐತಿಹಾಸಿಕ ಪಾದಯಾತ್ರೆಗೆ ಒಂದು ವರ್ಷ
  • ಭಾರತೀಯರೆಲ್ಲರ ಕಾರ್ಯಕ್ರಮ ಎಂದು ಬಣ್ಣಿಸಿದ ಸಿದ್ದರಾಮಯ್ಯ

ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಇದಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, “ರಾಹುಲ್ ಗಾಂಧಿಯವರು ಭಾರತ ಜೋಡೊ ಪಾದಯಾತ್ರೆಯ ನೇತೃತ್ವ ವಹಿಸಿದ್ದರೂ ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಇದು ಭಾರತೀಯರೆಲ್ಲರ ಕಾರ್ಯಕ್ರಮ. ದೇಶದ ಬೇರೆಬೇರೆ ಭಾಗಗಳಿಂದ, ಜಾತಿ, ಧರ್ಮ, ಪಕ್ಷ, ಪಂಥಗಳನ್ನು ಮೀರಿ ಜನ ಬಂದು ಇದರಲ್ಲಿ ಭಾಗವಹಿಸಿದ್ದರು” ಎಂದು ಯಾತ್ರೆಯನ್ನು ಮೆಲುಕು ಹಾಕಿದ್ದಾರೆ.

“ಮೂರು ದಶಕಗಳ ಹಿಂದೆ ಈ ದೇಶದಲ್ಲಿ ರಥಯಾತ್ರೆಯೊಂದು ಹೊರಟಿತ್ತು. ದ್ವೇಷ, ಸುಳ್ಳು, ಅಪನಂಬಿಕೆಗಳನ್ನು ಬಿತ್ತುತ್ತಾ ಸಾಗಿದ ಆ ಯಾತ್ರೆ ಬಹುತ್ವ ಭಾರತದ ಎದೆಯೊಳಗೆ ಮಾಡಿದ ಗಾಯ ಇನ್ನೂ ಮಾಸಿಲ್ಲ. ಆ ಗಾಯಕ್ಕೆ ಪ್ರೀತಿ, ಶಾಂತಿ, ಸಹಬಾಳ್ವೆಯ ಮುಲಾಮು ಹಚ್ಚಿ ಗುಣಪಡಿಸುವ ಸದುದ್ದೇಶದಿಂದ ರಾಹುಲ್ ಗಾಂಧಿಯವರು ಪಾದಯಾತ್ರೆ ಶುರುಮಾಡಿದ್ದರು. ಕಾಂಗ್ರೆಸ್ ಪಕ್ಷದ ನಾಯಕ ಮತ್ತು ದೇಶದ ಭರವಸೆಯ ಆಶಾಕಿರಣ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ. ದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Advertisements

ಭಾರತ್ ಜೋಡೋ‌ ಫಲವೇ ಗ್ಯಾರಂಟಿ ಯೋಜನೆಗಳು

“ದ್ವೇಷ ಹಂಚುವ ಮೂಲಕ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದ್ದ ಕೋಮುವಾದಿ ಶಕ್ತಿಗಳ ವಿರುದ್ಧ ಸೆಡ್ಡುಹೊಡೆದು ನಾವು ಬಿತ್ತಿದ್ದ ಪ್ರೀತಿಯ ಬೀಜ ವ್ಯರ್ಥವಾಗಲಿಲ್ಲ. ನಾಡಿನ ಸೌಹಾರ್ದ ಮನಸುಗಳನ್ನು ಒಂದಾಗಿಸಿದ ಭಾರತ್ ಜೋಡೊ ಯಾತ್ರೆಯ ಫಲ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ವ್ಯಕ್ತವಾಗಿದೆ. ರಾಹುಲ್ ಗಾಂಧಿಯವರು ಭಾರತ ಜೋಡೋ ಪಾದಯಾತ್ರೆಯುದ್ದಕ್ಕೂ ಜನತೆಯ ಜೊತೆ ನಡೆಸಿದ್ದ ಚರ್ಚೆ-ಸಂವಾದದ ಮೂಲಕ ಪಡೆದ ಅನುಭವದ ಫಲವೇ ನಮ್ಮ ಗ್ಯಾರಂಟಿ ಯೋಜನೆಗಳು” ಎಂದು ನೆನಪು ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಭಾರತ’ವೆಂಬುದು ಶ್ರೇಷ್ಠವೇ? ‘ಇಂಡಿಯಾ’ ಕನಿಷ್ಠವೇ?

“ಭಾರತದ ಇತಿಹಾಸದಲ್ಲಿ, ಕಾಂಗ್ರೆಸ್ ಪಕ್ಷ ಸ್ಥಾಪನೆಯಾದ 1885ರಿಂದ ಈವರೆಗಿನ ಸುಮಾರು ಒಂದೂಕಾಲು ಶತಮಾನದ ಅವಧಿ ಏನಿದೆ ಅದು ಗುಲಾಮಗಿರಿಯಿಂದ ಪ್ರಜಾಪ್ರಭುತ್ವದೆಡೆಗಿನ, ಅರಸೊತ್ತಿಗೆಯಿಂದ ಜನತಂತ್ರದೆಡೆಗಿನ, ಅಸಮಾನತೆಯಿಂದ ಸಮಾನತೆಯೆಡೆಗಿನ ಚಲನೆಯಾಗಿದೆ. ಭಿನ್ನತೆಯಿಂದ ಬಹುತ್ವದ ಕಸುವನ್ನೂ, ವೈವಿಧ್ಯತೆಯಿಂದ ಏಕತೆಯ ಬಲವನ್ನೂ ಪಡೆಯುವ ಮೂಲಕ ಭಾರತ ಇಂದು ಪ್ರಜಾಪ್ರಭುತ್ವವಾದಿ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಂತಿದೆ. ಭಾರತ ದೇಶದ ಈ ಅಭೂತಪೂರ್ವ ಪಯಣದಲ್ಲಿ ಚಾಲಕಶಕ್ತಿಯಂತೆ ಕಾರ್ಯನಿರ್ವಹಿಸಿರುವುದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯೂ ಹೊರಬೇಕಾಗಿದೆ. ಒಡೆದು ಹೋಗುತ್ತಿರುವ ಭಾರತವನ್ನು ಜೋಡಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಉನ್ನತ ಮೌಲ್ಯಗಳನ್ನು ಅನುಸರಿಸಿದಂತೆಯೇ ಸ್ವಾತಂತ್ರ್ಯೋತ್ತರ ಭಾರತದಲ್ಲಿಯೂ ಸಹ ಕಾಂಗ್ರೆಸ್ ಪಕ್ಷವು ಶಾಂತಿ, ಸಾಮರಸ್ಯ, ಧಾರ್ಮಿಕ ಸಹಿಷ್ಣುತೆಯಂಥ ಪ್ರಜಾತಾಂತ್ರಿಕ ಮೌಲ್ಯಗಳನ್ನು, ದೇಶದ ಏಕತೆಯನ್ನು ಎತ್ತಿ ಹಿಡಿಯುತ್ತಲೇ ಇಲ್ಲಿನ ವೈವಿಧ್ಯತೆ, ಬಹುತ್ವವನ್ನು ಸಂಭ್ರಮಿಸುವಲ್ಲಿ ಮುಂಚೂಣಿಯಲ್ಲಿದೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಭುತ್ವ ಪ್ರಜೆಗಳ ದನಿಗೆ ಕಿವಿಗೊಡಬೇಕು. ಅವರ ಕಷ್ಟ-ಸುಖ, ಸಮಸ್ಯೆ-ಸಂಕಷ್ಟಗಳನ್ನು ಅರಿಯುವ ಕೆಲಸವನ್ನು ಮಾಡಬೇಕು. ಜನ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಟ್ಟಾಗಿ ಬದುಕುವ ವಾತಾವರಣವನ್ನು ಕಲ್ಪಿಸಬೇಕು. ಆದರೆ ಭಾರತೀಯ ಜನತಾ ಪಕ್ಷ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ನಡುವೆ ಪರಸ್ಪರ ದ್ವೇಷಾಸೂಯೆಗಳನ್ನು ಬಿತ್ತಿ ಸಮಾಜವನ್ನು ಜಾತಿ-ಧರ್ಮದ ಆಧಾರದಲ್ಲಿ ಒಡೆಯುವ ಕೆಲಸವನ್ನು ಮಾಡುತ್ತಿದೆ. ಅನ್ಯಾಯದ ವಿರುದ್ದ ದನಿ ಎತ್ತುವವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಇದರ ವಿರುದ್ದ ಸಂಘಟಿತವಾದ ಹೋರಾಟ ನಡೆಯಬೇಕಾಗಿದೆ. ಬನ್ನಿ, ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲತುಂಬೋಣ. ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ. ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣ” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X