ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆಪ್ಟೆಂಬರ್ 16ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ ಉಳ್ಳಿಯಡ ಎಂ ಪೂವಯ್ಯ ಹೇಳಿದ್ದಾರೆ.
ಬೆಳ್ಳಿ ಮಹೋತ್ಸವ ಆಚರಣಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅವರು ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
“ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್‌ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 1 ಕೋಟಿ ರೂಪಾಯಿ ಮೊತ್ತದ ಕ್ಷೇಮ ನಿಧಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೊಡಗಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ” ಎಂದು ಹೇಳಿದರು.
“ಬೆಳ್ಳಿ ಮಹೋತ್ಸವ ಪ್ರಯುಕ್ತ ಹೊರತಲಾಗುತ್ತಿರುವ ಸ್ಮರಣ ಸಂಚಿಕೆ ಪಿಂಜರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ನಿಯಮಿತದ ಲಾಂಛನವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅನಾವರಣ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ ಪಿ ಸುಜಾ ಕುಶಾಲಪ್ಪ, ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ತ್ಯಾಗರಾಜ್, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ ರಾಜೇಂದ್ರ, ಗೌರವಾಧ್ಯಕ್ಷೆ ಬಿ ಆರ್ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಲಶಾಸ್ತ್ರ ಅಧ್ಯಯನ ವರದಿ; ಯಥಾವತ್ ಜಾರಿಗೆ ಕುಂಚಿಟಿಗರ ಆಗ್ರಹ
“ಜೀವನ್ ಚಿಣ್ಣಪ್ಪ, ಎಚ್.ಟಿ. ಅನಿಲ್, ಡಾ.ಉಳ್ಳಿಯಡ ಎಂ. ಪೂವಯ್ಯ, ಜಗದೀಶ್ ಬೆಳ್ಯಪ್ಪ, ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ ಚಿದ್ವಿಲಾಸ್, ಡಾಟಿ ಪೂವಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.
ಕೊಡಗು ಪ್ರೆಸ್ ಕ್ಲಬ್ ಸದಸ್ಯರು ಹಾಗೂ ಕುಟುಂಬಸ್ಥರಿಗೆ ಮನರಂಜನಾ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ ಆರ್ ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.