ಐಪಿಎಲ್ 2023: ಮುಂಬೈ ವಿರುದ್ಧ ಆರ್​​ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ

Date:

Advertisements

ಐಪಿಎಲ್ 16ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್​​ಸಿಬಿ ತಂಡ ಭರ್ಜರಿ ಗೆಲುವಿನ ಆರಂಭ ಪಡೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಆರ್​​ಸಿಬಿ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಲ್ಲಿ ಮಣಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ, ತಿಲಕ್ ವರ್ಮಾ ಅವರ ಏಕಾಂಗಿ ಹೋರಾಟದ [84*] ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 171 ರನ್‌ ಗಳಿಸಿತ್ತು.

ಆದರೆ ಚೇಸಿಂಗ್ ವೇಳೆ ಆರ್​​ಸಿಬಿಗೆ 171 ರನ್ ಸವಾಲಾಗಲೇ ಇಲ್ಲ. ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡುಪ್ಲೆಸ್ಸಿ ಮೊದಲ ವಿಕೆಟ್‌ಗೆ 15 ಓವರ್‌ಗಳಲ್ಲಿ 148 ರನ್‌ಗಳಿಸುವ ಮೂಲಕ ಮುಂಬೈ ಬೌಲಿಂಗ್ ದಾಳಿಯನ್ನು ಧೂಳಿಪಟ ಮಾಡಿದರು.

ಡುಪ್ಲೆಸ್ಸಿಸ್ [ 73 ರನ್, 43 ಎಸೆತ, 5 ಬೌಂಡರಿ, 6 ಸಿಕ್ಸ್] ಮತ್ತು ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 82 ರನ್‌ಗಳಿಸಿ ಅಜೇಯರಾಗುಳಿದರು. ಕೊಹ್ಲಿ ಅಮೋಘ ಇನ್ನಿಂಗ್ಸ್ 6 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಒಳಗೊಂಡಿತ್ತು.

ಮೂರನೇಯ ಕ್ರಮಾಂಕದಲ್ಲಿ ಬಂದ ದಿನೇಶ್ ಕಾರ್ತಿಕ್ ಮೂರು ಎಸೆತಗಳನ್ನು ಎದುರಿಸಿ ಖಾತೆ ತೆರೆಯುವ ಮುನ್ನವೇ ಗ್ರೀನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Download Eedina App Android / iOS

X