ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ಯಾವ ಕುತೂಹಲವಿಲ್ಲ, ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಮಾಧ್ಯಮದ ಸುದ್ದಿಗಾರಗೊಂದಿಗೆ ಮಾತನಾಡುತ್ತಾ, ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.