ಅಂತರ್ಜಾತಿ ವಿವಾಹ ಜಾತಿ ವಿನಾಶದ ಪ್ರಥಮ ಹೆಜ್ಜೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದರೆ ಮಾತ್ರ ಸಮ ಸಮಾಜ ನಿರ್ಮಾಣ: ಸಿಎಂ
  • ಗಾಂಧಿ ಭವನದಲ್ಲಿ ಕಮಲಾ ಹಂಪನಾ ಸಾಹಿತ್ಯ ವೇದಿಕೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಜಾತಿ ನಾಶವಾಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಅಂತರ್ಜಾತಿ ವಿವಾಹ ಜಾತಿ ವಿನಾಶದ ಪ್ರಥಮ ಹೆಜ್ಜೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘the journey of life’ ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾಮಾಜಿಕ‌, ಆರ್ಥಿಕ‌ ತಳಹದಿಯ ಮೇಲೆ ರೂಪುಗೊಳ್ಳದಿದ್ದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂದಿದ್ದರು. ಹೀಗಾಗಿ ಸ್ವಾತಂತ್ರ್ಯದ ಉದ್ದೇಶ ಈಡೇರಬೇಕಾದರೆ ಸಮಾಜದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆ ಆಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

Advertisements

ಅಂತರ್ಜಾತಿ ವಿವಾಹ ಜಾತಿ ವಿನಾಶದ ಪ್ರಥಮ ಹೆಜ್ಜೆ. ನಮ್ಮ ಸಂವಿಧಾನ ಕೂಡ ನಮ್ಮದು ಜಾತ್ಯತೀತ ಸಮಾಜ ಎಂದು ಹೇಳಿದೆ. ಆ ಕಾಲದಲ್ಲೇ ಅಂತರ್ಜಾತಿ ವಿವಾಹವಾಗಿ ತಮ್ಮ ಮೂವರೂ ಮಕ್ಕಳನ್ನು ಅಂತರ್ಜಾತಿ ವಿವಾಹ ಮಾಡಿರುವ ಹಂಪ ನಾಗರಾಜಯ್ಯ ಮತ್ತು ಕಮಲಾ ಹಂಪನ ಅವರು ನಿಜಕ್ಕೂ ಆದರ್ಶ ದಂಪತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾತಿ ಯಾವುದಿದ್ದರೂ ನಾವು ಅಂತಿಮವಾಗಿ ಮನುಷ್ಯರಾಗಬೇಕು. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ದ್ವೇಷಿಸುವುದು ಅಧರ್ಮ. ಆದರೆ ಇಂದು ದ್ವೇಷವನ್ನು ಆರಾಧಿಸುವ ಸಮಾಜವನ್ನು ನಿರ್ಮಿಸುವ ಅಪಾಯಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪ್ರಜ್ಞಾವಂತರಾದ ನಾವೆಲ್ಲರೂ ತಡೆ ಹಾಕಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಹಂಪ ನಾಗರಜಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕೃತಿಗಳ ಕುರಿತು ಮಾತನಾಡಿದರು. ಲೇಖಕ ಜಿ.ಎನ್.ಮೋಹನ್ ಮತ್ತು ಕಮಲಾ ಹಂಪನಾ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X