ಬಳ್ಳಾರಿ | ಬರಗಾಲ ಘೋಷಿಸಿ, ರೈತರನ್ನು ರಕ್ಷಿಸಿ; ಮಾಜಿ ಶಾಸಕ ಸೋಮಶೇಖರ ರೆಡ್ಡಿ

Date:

Advertisements

ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದೆ ಎಂದು ಉಲ್ಲೇಖಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಬಿಜೆಪಿ ರೈತ ಮೋರ್ಚಾ ತಾಲೂಕು, ಬಳ್ಳಾರಿ ಜಿಲ್ಲಾ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಬಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ರಾಜ್ಯದಲ್ಲಿ 134 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೂ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ನಿಯಮಾವಳಿಗಳ ಬದಲಾವಣೆಯಾಗಿದೆ ಎಂದು ನೆಪ ಹೇಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಖಂಡನೀಯ. ಕೂಡಲೇ ಬರಗಾಲ ಘೋಷಿಸಿ ರೈತರನ್ನು ರಕ್ಷಿಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರ ಸಮಸ್ಯೆಗಳಿಗೆ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳಲಿ

“ಕಾಂಗ್ರೆಸ್ ಸರ್ಕಾರ ರಚನೆಯಾಗಿ ನೂರು ದಿನ ಪೂರೈಸಿದೆ. ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೊಡುವ 4‌,000 ರೂಪಾಯಿಯನ್ನು ನಿಲ್ಲಿಸಲಾಗಿದೆ. ನೀರಾವರಿ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ. ಎಪಿಎಂಸಿ ಕಾಯ್ದೆ ಹಿಂಪಡೆದರೂ, ವಿದ್ಯಾಸಿರಿ ಯೋಜನೆ ನಿಲ್ಲಿಸಿದ್ದಾರೆ” ಎಂದು ಟೀಕಿಸಿದರು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ ಎಂ ಸತೀಶ್, ಜಿಲ್ಲಾ ಅಧ್ಯಕ್ಷ ಮುರಹರಿ ಗೌಡ, ಹಿರಿಯ ಮುಖಂಡರುಗಳಾದ ಹನುಮಂತಪ್ಪ, ರಾಮಲಿಂಗಪ್ಪ, ತಿಮ್ಮಾರೆಡ್ಡಿ, ರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಪಾಲಿಕೆ ಕಸದ ವಾಹನ ಹರಿದು ಮೂರು ವರ್ಷದ ಮಗು ಸಾವು : ಚಾಲಕನ ವಿರುದ್ಧ ದೂರು ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ...

ಬಳ್ಳಾರಿ | ಈಶ್ವರಚಂದ್ರ ವಿದ್ಯಾಸಾಗರರ ಜನ್ಮದಿನ ಆಚರಿಸಿದ ಎಐಡಿಎಸ್‌ಒ

ಊಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ...

ಆಸ್ಪತ್ರೆ ಎದುರಿಗೊಂದು ನಿಷ್ಕ್ರಿಯ ನೀರಿನ ಘಟಕ; ನೀರಿಗಾಗಿ ನಿತ್ಯ ರೋಗಿಗಳ ಪರದಾಟ

ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

Download Eedina App Android / iOS

X