ಗದಗ | ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ

Date:

Advertisements

ನಾವು ಯಾವುದೇ ರಂಗದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಸಾಕ್ಷರತೆ ಅತಿ ಅವಶ್ಯಕವಾಗಿದೆ. ಎಲ್ಲರೂ ಸಾಕ್ಷರರಾಗಬೇಕು. ಶಿಕ್ಷಣದ ಮಹತ್ವವನ್ನು ಸಾರುವ ದಿನವೇ ಅಂತರಾಷ್ಟ್ರೀಯ ಸಾಕ್ಷರತಾ ದಿನವಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ ಹೇಳಿದರು.

57ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ ಮಾತನಾಡಿ, “ನಾವು ಸಾಕ್ಷರತೆಯ ಬಗ್ಗೆ ಬಹಳಷ್ಟು ಮುತುವರ್ಜಿ ವಹಿಸಿ ಸಾಕ್ಷರತೆಯ ಕಾರ್ಯ ನಿರ್ವಹಿಸಬೇಕು. ಎಲ್ಲ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‍ನ ಹಿರಿಯ ಹಾಗೂ ಕಿರಿಯ ಉಪನ್ಯಾಸಕರು ಜಿಲ್ಲೆಯ ಶಾಲಾ ಬಿಸಿಯೂಟ ಸಿಬ್ಬಂದಿಗಳಲ್ಲಿ ಮತ್ತು ಶಾಲಾ ಅಭಿವೃದ್ಧಿ ವೀಕ್ಷಣಾ ಸಮಿತಿ ಸದಸ್ಯರಲ್ಲಿ ಅನಕ್ಷರಸ್ಥರು ಇದ್ದರೆ ಅಂತಹವರನ್ನು ಗುರುತಿಸಿ ಅವರನ್ನು ಸಾಕ್ಷರರನ್ನಾಗಿ ಮಾಡಲು ನಮ್ಮ ಹಂತದಲ್ಲಿ ಪ್ರಯತ್ನಿಸಬೇಕು” ಎಂದು ತಿಳಿಸಿದರು.

Advertisements

ಡಯಟ್‍ ಪ್ರಾಚಾರ್ಯ ಜಿ ಎಲ್ ಬಾರಾಟಕ್ಕೆ ಮಾತನಾಡಿ, “ವಿದ್ಯಾವಂತರು ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಬೇಕು. ಜನರು ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಒಂದು ಊರುಗೋಲು ಇದ್ದಂತೆ” ಎಂದು ಹೇಳಿದರು.

ಶಿಕ್ಷಣಾರ್ಥಿಗಳು

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಸ್ ಎಸ್ ಕುರಿಯವರ ಸಾಕ್ಷರತೆ ಕುರಿತು ಪ್ರಾಸ್ತಾವಿಕವಾಗಿ ಮಾತಾನಾಡಿ, “ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಂಪೂರ್ಣ ಸಾಕ್ಷರ ಗ್ರಾಮ ಪಂಚಾಯಿತಿ ಸಾಕ್ಷರತಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಲಿಂಕ್ ಡಾಕ್ಯೂಮೆಂಟ್ ಜನಶಿಕ್ಷಣ ನಿಲಯ ಯೋಜನೆಯಡಿಯ ಮೂಲ ಸಾಕ್ಷರತಾ ಕಾರ್ಯಕ್ರಮ ಮತ್ತು ರಾಷ್ಟ್ರ ಮಟ್ಟದ ನವಭಾರತ ಸಾಕ್ಷರತಾ ಕಾರ್ಯಕ್ರಮಗಳನ್ನು ಜಿಲ್ಲೆಯ ಶಿಕ್ಷಣ ಅಧಿಕಾರಿಗಳು ತಮ್ಮ ಸಹಯೋಗದೊಂದಿಗೆ ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವಜನರ ಧನಾತ್ಮಕ ಚಿಂತನೆ ದೇಶದ ಬೆಳವಣಿಗೆಗೆ ಅವಶ್ಯಕ: ಎಸ್‌ಪಿ ಉಮಾ ಪ್ರಶಾಂತ್

ಸಾಕ್ಷರತಾ ಧ್ವಜಾರೋಣಹಣದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರು, ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕದ ಅಧಿಕಾರಿಗಳು,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಡಿ.ಸಿ.ಪಾವಟೆ ಬಿ.ಎಡ್.ಮಹಾವಿದ್ಯಾಲಯದ ಉಪನ್ಯಾಸಕರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಪಾತ್ರ ಅಪಾರ: ಸಚಿವ ಎಚ್.ಕೆ.ಪಾಟೀಲ

"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ...

ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

"ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು...

ಗದಗ | ಭಾವನೂರು ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ...

ಗದಗ | ಸಕಾಲ- ಗಡುವು ಮೀರಿದ ಅರ್ಜಿಗಳ ಶೀಘ್ರ ವಿಲೇವಾರಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಿಗೆ ಸರ್ಕಾರದ ಎಲ್ಲ ಸೇವೆಗಳು ನಿಗದಿತ ಅವಧಿಯಲ್ಲಿ ಜನರಿಗೆ ತಲುಪುವಂತೆ ಮಾಡುವ...

Download Eedina App Android / iOS

X