ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಯಲ್ಲಿ ಮಸ್ಕಿ ಗ್ರಾಹಕರಿಗೆ ಪ್ರತ್ಯೇಕ ನಗದು ಕೌಂಟರ್ ತೆರೆಯಬೇಕೆಂದು ಒತ್ತಾಯಿಸಿ ಬ್ಯಾಂಕ್ ವ್ಯವಸ್ಥಾಪಕ ಸುಶೀಲ್ ಉತ್ತಮ್ ಅವರಿಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ ಮನವಿ ಸಲ್ಲಿಸಿದೆ.
“ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಬೀದರ್-ಶ್ರೀರಂಗಪಟ್ಟಣ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಎನ್ ಎಚ್ 150ಎಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಬ್ಯಾಂಕ್) ಮಸ್ಕಿ ಶಾಖೆ ತಾಲೂಕಿಗೆ ಮುಖ್ಯ ಶಾಖೆಯಾಗಿದೆ. ತಾಲೂಕಿನ ಹಲವು ಗ್ರಾಮಗಳಿಂದ ಕಚೇರಿ ವ್ಯವಹಾರಕ್ಕಾಗಿ ಬರುವ ಬ್ಯಾಂಕ್ ಗ್ರಾಹಕರಿಗೆ ಒಂದೇ ನಗದು ಕೌಂಟರ್ ಇದೆ” ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಮುಖಂಡರು ಹೇಳಿದರು.
“ಹಳ್ಳಿ, ಗ್ರಾಮಗಳಿಂದ ಬರುವ ಗ್ರಾಹಕರಿಗೆ ಒಂದೇ ನಗದು ಕೌಂಟರ್ ಇದ್ದು, ಗ್ರಾಹಕರು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿನಲ್ಲಿ ಇನ್ನೊಂದು ನಗದು ಕೌಂಟರ್ ತೆರೆಯಬೇಕು. ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆ ಹಾಗೂ ಸಾರ್ವಜನಿಕ ಶೌಚಾಲಯದ ಕೊರತೆಯಿಂದ ಬ್ಯಾಂಕಿನಲ್ಲಿ ವ್ಯವಹಾರ ಮಾಡಲು ಬರುವ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತೊಂದು ನಗದು ಕೌಂಟರ್ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಬೇಕು” ಎಂದು ಅಂತರಾಷ್ಟ್ರೀಯ ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಎಸ್ ನಜೀರ್, ಅತಿಥಿ ಉಪನ್ಯಾಸಕ ಸುರೇಶ್ ಬಳಗಾನೂರ, ಗ್ಯಾನಪ್ಪ ದೊಡ್ಮನಿ, ಸಿದ್ದಾರ್ಥ್ ಹಾಲಪುರ್, ಬಸಪ್ಪ ನಾಯಕ್ ಸೇರಿದಂತೆ ಇತರರು ಇದ್ದರು.