ಕೆಎಸ್‌ಆರ್‌ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಸಮೀಪದ ಮಂಕನಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಕಂದಕಕ್ಕೆ ಉರುಳುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದು, ಬಸ್‌ನೊಳಗೆ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡರಿಕೆಗೆ ಸಿಐಟಿಯು ಆಗ್ರಹ
ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್ ದುಃಸ್ಥಿತಿಯಲ್ಲಿರುವ ಬಸ್ ಚಲಾಯಿಸುತ್ತಿರುವುದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಗುಜರಿ ಬಸ್ ನಿಲ್ಲಿಸಿ, ಸುಸ್ಥಿತಿಯ ಬಸ್‌ಗಳನ್ನು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.