ಮೈತ್ರಿ ಬಗ್ಗೆ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ, ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ : ಕುಮಾರಸ್ವಾಮಿ

Date:

Advertisements
  • ‘ಇದುವರೆಗೆ ಮೈತ್ರಿ ಕುರಿತು ಅಥವಾ ಸೀಟು ಹಂಚಿಕೆ ಚರ್ಚೆ ನಡೆದಿಲ್ಲ’
  • ‘ನಾಳೆ ಕಾರ್ಯಕರ್ತರ ಸಭೆ ಮಾಡಲು ದೇವೇಗೌಡರು ಹೇಳಿದ್ದಾರೆ’

ಬಿ ಎಸ್‌ ಯಡಿಯೂರಪ್ಪ ಅವರು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಮಾತನಾಡಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ, ಇದುವರೆಗೆ ಮೈತ್ರಿ ಅಥವಾ ಸೀಟು ಹಂಚಿಕೆ ಕುರಿತು ಅಧಿಕೃತ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಆಂಗ್ಲ ಮಾಧ್ಯಮ ಸುದ್ದಿ ಸಂಸ್ಥೆಯೊಂದಿಗೆ ಶನಿವಾರ ಮಾತನಾಡಿರುವ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ್ದಾರೆ.

“ಪ್ರಸಕ್ತ ಬೆಳವಣಿಗೆ ಪ್ರಾಥಮಿಕ ಹಂತದಲ್ಲಿದೆ ಇದೆ ಅಷ್ಟೇ. ನಾಳೆ ಕಾರ್ಯಕರ್ತರ ಸಭೆ ಮಾಡಲು ದೇವೇಗೌಡರು ಹೇಳಿದ್ದಾರೆ. ಹೀಗಾಗಿ ಕಾರ್ಯಕರ್ತರ ಅಭಿಪ್ರಾಯ ಕೇಳಬೇಕು ಅಲ್ವಾ?” ಎಂದು ಪ್ರಶ್ನಿಸಿದರು.

Advertisements

“ಇಲ್ಲಿ ಕೊಟ್ಟು ತೆಗೆದುಕೊಳ್ಳುವುದು ಅಲ್ಲ, ವಿಶ್ವಾಸ, ಗೌರವ ಮುಖ್ಯ. ಗೌರವ, ವಿಶ್ವಾಸವನ್ನು ಮೊದಲು ಸರಿಪಡಿಸಿಕೊಳ್ಳಬೇಕು. ಮೈತ್ರಿ ವಿಚಾರವಾಗಿ ಉತ್ತರ ನೀಡುವ ಕಾಲ ಇನ್ನೂ ದೂರ ಇದೆ. ಯಾವುದೇ ರಾಜಕಾರಣಿಗೂ ಹತಾಶೆ ಎಂಬುದು ಬರಲ್ಲ. ಇಲ್ಲಿ ಹತಾಶೆ ಆಗುತ್ತಿರುವುದು, ನಡುಕ ಆಗಿರುವುದು ಕಾಂಗ್ರೆಸ್‌ಗೆ ಮಾತ್ರ” ಎಂದರು.

“ಎರಡು ಪಕ್ಷದ ನಾಯಕರು ಸೌಹಾರ್ದಯುತವಾಗಿ ಹಲವು ಬಾರಿ ಭೇಟಿ ಮಾಡಿದ್ದೇವೆ. ಮೈತ್ರಿಗೆ ಸಂಬಂಧಿಸಿ ಚರ್ಚೆ ನಡೆಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿರುವುದರಿಂದ ಜನರಿಗೆ ಪರ್ಯಾಯ ಆಯ್ಕೆಗಳು ಬೇಕಿದೆ. 2006ರಲ್ಲಿ ನಾನು ಬಿಜೆಪಿಯೊಂದಿಗೆ ಕೈಜೋಡಿಸಿದ್ದೆ. 20 ತಿಂಗಳ ಉತ್ತಮ ಆಡಳಿತ ನಡೆಸಿದ್ದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿಶ್ರೇಷ್ಠತೆಯ ವ್ಯಸನ- ‘ಸನಾತನ’ ಮನಸ್ಥಿತಿಯ ವ್ಯಾಧಿ

ಮೈತ್ರಿ ಖಚಿತಪಡಿಸಿದ ಮುಖಂಡರು

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಬಿಜೆಪಿ– ಜೆಡಿಎಸ್‌ ನಿರ್ಧರಿಸಿದ್ದು, ಕೆಲವೇ ದಿನಗಳಲ್ಲಿ ಸೀಟು ಹಂಚಿಕೆ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಎರಡೂ ಪಕ್ಷಗಳ ವರಿಷ್ಠರ ಹಂತದಲ್ಲೇ ಮೈತ್ರಿಯ ನಿರ್ಧಾರ ಅಂತಿಮಗೊಂಡಿದೆ. ಜೆಡಿಎಸ್‌ ನಾಯಕರು ಮೈತ್ರಿ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಆ ಪಕ್ಷದ ಕೆಲವು ಮುಖಂಡರು ಜೆಡಿಎಸ್‌ ಜತೆಗಿನ ಮೈತ್ರಿಯನ್ನು ಖಚಿತಪಡಿಸಿ, ಮಾಧ್ಯಮಗಳ ಜೊತೆ ಮಾತನಾಡಿದ್ದನ್ನು ಇಲ್ಲಿ ಗಮನಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X