ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ದೇಶದಲ್ಲಿಯೇ ಕುಖ್ಯಾತಿ ಗಳಿಸಿದೆ. ಇದಕ್ಕೆ ಇದೀಗ ಪುಷ್ಟಿ ನೀಡುವಂತೆ ಬಾನಲ್ಲಿ ಹಾರಾಡುವ ಹೆಲಿಕಾಪ್ಟರ್‌ವೊಂದು ರಸ್ತೆಯ ಮೇಲೆ ನಿಂತು ಮತ್ತಷ್ಟು ಸಂಚಾರ ದಟ್ಟಣೆಗೆ ತೊಂದರೆ ಮಾಡಿದಂತಹ ಘಟನೆ ನಡೆದಿದೆ.

ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಸೆ. 7ರಂದು ಬೆಂಗಳೂರಿನ ರಸ್ತೆಯ ಮೇಲೆ ನಿಂತಿದ್ದ ಹೆಲಿಕಾಪ್ಟರ್ ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಫೋಟೋ ವೈರಲ್ ಆಗಿದ್ದು, ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ತಮ್ಮ ತಮ್ಮ ದಿನನಿತ್ಯದ ಕೆಲಸಗಳಿಗೆ ತೆರಳಬೇಕಾದವರು ಬಾನಾಡಿಯಲ್ಲಿ ಹಾರಾಡಬೇಕಾದ ಹೆಲಿಕಾಪ್ಟರ್‌ ರಸ್ತೆಯ ಮೇಲೆ ನಿಂತಿದ್ದನ್ನು ಕಂಡು ಆಶ್ಚರ್ಯಚಕಿತರಾಗಿದ್ದರು. ಈ ವೇಳೆ, ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಹೆಲಿಕಾಪ್ಟರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯುವಾಗ ಅದು ರಸ್ತೆ ಮಧ್ಯೆ ಸಿಲುಕಿದೆ ಎಂದು ಹೇಳಲಾಗಿದೆ.

Advertisements

ಈ ಫೋಟೋಗೆ ಹಲವು ಎಕ್ಸ್ ಬಳಕೆದಾರರು ಕಾಮೆಂಟ್‌ ಮಾಡಿದ್ದು, “ಹಕ್ಕಿಯೊಂದು ರಸ್ತೆ ದಾಟುತ್ತಿತ್ತು. ಹೀಗಾಗಿ, ನಾನು ಆಫೀಸ್‌ಗೆ ಇಂದು ತಡವಾಗಿ ಬಂದೆ ಎಂದು ನನ್ನ ಬಾಸ್‌ಗೆ ಹೇಳಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುಕರ ಎಂಬ ಎಕ್ಸ್‌ ಬಳಕೆದಾರರು, “ಹೆಲಿಕಾಪ್ಟರ್ ವಿಭಾಗದಿಂದ ಹಾರಾಟ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಗುತ್ತಿದೆ. ಎಚ್ಎಎಲ್‌ನಲ್ಲಿ ಇದು ನಿಯಮಿತವಾಗಿ ನಡೆಯುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರಲ್ಲ, ಮೊದಲು ಬಿಬಿಎಂಪಿ ಚುನಾವಣೆ ನಡೆಸಿ: ಆಪ್

“ಇದಕ್ಕಾಗಿಯೇ ಭೂಮಿ ಮೇಲೆ ವಾಹನ ಚಲಿಸುವ ಚಾಲಕರಿಗೆ ಮಾತ್ರವಲ್ಲದೆ, ಗಾಳಿಯಲ್ಲಿ ಸಂಚರಿಸುವ ಪೈಲಟ್‌ಗಳಿಗೆ ಡ್ರಂಕ್ ಮತ್ತು ಡ್ರೈವ್ ಪರೀಕ್ಷೆಯನ್ನು ಕಡ್ಡಾಯಗೊಳಿಸಬೇಕು” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

“ರಸ್ತೆ ಮಧ್ಯದಲ್ಲಿ ಹೆಲಿಕಾಪ್ಟರ್ ಪಂಕ್ಚರ್ ಆಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಮತ್ತೊಬ್ಬರು ತಮಾಷೆಯಾಗಿ ಟ್ವೀಟ್‌ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X