- ಬೆಂಗಳೂರಿನ ಕರ್ನಾಟಕ ಹಜ್ ಭವನದಲ್ಲಿ ವಸತಿ ಸಹಿತ ತರಬೇತಿ
- ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
2023-24ನೇ ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್ ಭವನದಲ್ಲಿ ನಡೆಯಲಿರುವ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು. ತರಬೇತಿಯು ಸುಮಾರು 10 ತಿಂಗಳ ಅವಧಿಯದ್ದಾಗಿರುತ್ತದೆ.
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವವರು ಕನಿಷ್ಠ ಪದವಿ ವಿದ್ಯಾರ್ಹತೆ ಪಾಸು ಮಾಡಿರಬೇಕು. ಅಭ್ಯರ್ಥಿಯ ವಯಸ್ಸು ಕನಿಷ್ಠ 21 ರಿಂದ 35 ವರ್ಷ ಮೀರಿರಬಾರದು.
ಈಗಾಗಲೇ ಇಲಾಖೆ-ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸೆ.16, 2023 ಕೊನೆಯ ದಿನಾಂಕವಾಗಿದ್ದು, ಸೇವಾ ಸಿಂಧೂ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8722299990 ಗೆ ಕರೆ ಮಾಡಿ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.
ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ : ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ
As I trying to apply this application , but the date was denied , can I grab opportunity of training of IAS IPS