ಮಂಡ್ಯ | ಕಾರಿನಲ್ಲಿ ಬೆಂಕಿ; ಮೂವರು ಪಾರು

Date:

Advertisements

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಗಣಂಗೂರು ಟೋಲ್ ಪ್ಲಾಜಾ ಬಳಿಯ ಗೌಡಹಳ್ಳಿ ಬಳಿ ತಮಿಳುನಾಡು ನೋಂದಣಿ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್‌ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಯಾಣಿಕರು ಬೆಂಗಳೂರಿನಿಂದ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ. ಅವರು ಟೋಲ್ ಪ್ಲಾಜಾವನ್ನು ದಾಟಿದ ಕೂಡಲೇ, ಬಾನೆ‌ಟ್‌ನಿಂದ ಹೊಗೆ ಹೊರಸೂಸುತ್ತಿರುವುದನ್ನು ಗಮನಿಸಿದ ಸವಾರರು ವಾಹನದಿಂದ ಕೆಳಗಿಳಿದರು. ಕೆಲವೇ ನಿಮಿಷಗಳಲ್ಲಿ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲೇ ಕಾರು ಬೆಂಕಿಗೆ ಆಹುತಿಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಅವರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಕಾರ್ಯಪ್ರವೃತ್ತರಾದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಸರಣಿ ಅಪಘಾತ; ಹಲವರಿಗೆ ಸಣ್ಣಪುಟ್ಟ ಗಾಯ

“ಬಾನೆಟ್‌ನಿಂದ ಹೊಗೆ ಹೊರಸೂಸುತ್ತಿರುವುದನ್ನು ಗಮನಿಸಿದ ಕೂಡಲೇ ಅವರೆಲ್ಲರೂ ವಾಹನದಿಂದ ಹೊರಬಂದಿದ್ದರಿಂದ ಕಾರು ಪ್ರಯಾಣಿಕರಿಗೆ ಯಾವುದೇ ರೀತಿಯ ಗಾಯಗಳಾಲಿ, ಅನಾಹುತಗಳಾಗಲೀ ಸಂಭವಿಸಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ...

ಮಂಡ್ಯ | ಮದ್ದೂರಿನ ಸೌಹಾರ್ದ-ಸಾಮರಸ್ಯ ನಡಿಗೆ ಯಶಸ್ವಿಗೊಳಿಸಲು ಜನಪರ ಸಂಘಟನೆಗಳ ಮನವಿ

ಇತ್ತೀಚಿಗೆ ಮದ್ದೂರಿನಲ್ಲಿ ಸಂಭವಿಸಿದ ಗಲಭೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸೌಹಾರ್ದತೆ, ಸಾಮರಸ್ಯ ಬೆಳೆಸಲು...

ಶ್ರೀರಂಗಪಟ್ಟಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ʼಮತಪತ್ರದಲ್ಲಿ ಅಡಗಿದೆ ಪ್ರಜಾಪ್ರಭುತ್ವದ ಶಕ್ತಿʼ ಎಂಬ ಶೀರ್ಷಿಕೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ...

ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ₹1970 ಕೋಟಿ ಐತಿಹಾಸಿಕ ಅನುದಾನ: ಡಿ ಕೆ ಶಿವಕುಮಾರ್

ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು...

Download Eedina App Android / iOS

X